Homeತಾಜಾ ಸುದ್ದಿBelthangady : ಕಾಶಿಬೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಚರಂಡಿಗೆ ಬಿದ್ದ ಕಾರು...

Belthangady : ಕಾಶಿಬೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಚರಂಡಿಗೆ ಬಿದ್ದ ಕಾರು ; ಮೂವರಿಗೆ ಗಾಯ !

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಕಾಶಿಬೆಟ್ಟು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಈ ರಸ್ತೆ ಅಪಘಾತ ನಡೆದಿದೆ. ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಕಾಶಿಬೆಟ್ಟು ತಲುಪುತ್ತಿದ್ದಂತೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ಅತ್ತಿತ್ತ ಸಾಗಿದ ಕಾರು ಕ್ಷಣಾರ್ಧದಲ್ಲಿ ರಸ್ತೆಯ ಪಕ್ಕದಲ್ಲಿದ್ದ ಆಳವಾದ ಚರಂಡಿಗೆ ಉರುಳಿ ಬಿದ್ದಿದೆ. ಅಪಘಾತದ ಸಮಯದಲ್ಲಿ ಕಾರಿನಲ್ಲಿ ಒಟ್ಟು ಮೂವರು ಪ್ರಯಾಣಿಕರು ಸಂಚರಿಸುತ್ತಿದ್ದರು ಎಂದು ತಿಳಿದುಬಂದಿದೆ. ಕಾರು ಚರಂಡಿಗೆ ಬಿದ್ದ ರಭಸಕ್ಕೆ ತೀವ್ರ ಹಾನಿಯಾಗಿದ್ದರೂ, ಒಳಗಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ನಡೆದ ತಕ್ಷಣವೇ ಸ್ಥಳೀಯರು ಧಾವಿಸಿ ಬಂದು ಕಾರಿನಲ್ಲಿದ್ದವರನ್ನು ಹೊರತೆಗೆಯಲು ನೆರವಾಗಿದ್ದಾರೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯರ ಸಹಕಾರದೊಂದಿಗೆ ಅವರನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಹಾಗೂ ಚರಂಡಿಗೆ ಬಿದ್ದಿದ್ದ ಕಾರನ್ನು ತಗೆಯಲು ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Read This : Bantwal : ಸೀಮಂತ ಮುಗಿಸಿ ಮರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮಂಗಳೂರಿನ ಯುವಕ ವಿಕಾಸ್ ದುರಂತ ಸಾವು!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments