ಕಾರ್ಕಳ: ಕಳೆದ ಸುಮಾರು 42 ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ನಿವಾಸಿಯೊಬ್ಬರನ್ನು ಕಾರ್ಕಳ ನಗರ ಠಾಣಾ ಪೊಲೀಸರು ಮಹಾರಾಷ್ಟ್ರದಲ್ಲಿ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ವ್ಯಕ್ತಿಯನ್ನು ಪಳ್ಳಿ ಗ್ರಾಮದ ನಿವಾಸಿ ರವೀಂದ್ರ ಶೆಟ್ಟಿ (65) ಎಂದು ಗುರುತಿಸಲಾಗಿದೆ. ಹಳೆಯ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಈತ ದಶಕಗಳ ಹಿಂದೆಯೇ ಊರು ಬಿಟ್ಟು ಮಹಾರಾಷ್ಟ್ರಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ನಿರಂತರ ಶೋಧ ನಡೆಸುತ್ತಿದ್ದ ಕಾರ್ಕಳ ನಗರ ಪೊಲೀಸರ ತಂಡವು, ಸೆಪ್ಟೆಂಬರ್ 1ರಂದು ಮಹಾರಾಷ್ಟ್ರದ ಮುಲುಂಡ್ ವೆಸ್ಟ್ ನಲ್ಲಿ ಆತನನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದೆ.
ಬಳಿಕ ಆರೋಪಿಯನ್ನು ಕಾರ್ಕಳಕ್ಕೆ ಕರೆತಂದು ಸೆಪ್ಟೆಂಬರ್ 2ರಂದು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯವು ರವೀಂದ್ರ ಶೆಟ್ಟಿ ಅವರಿಗೆ ಜಾಮೀನು ಮಂಜೂರು ಮಾಡಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಇದನ್ನು ಓದಿ : Udupi : ವಾರಂಬಳ್ಳಿಯಿಂದ ದಿಢೀರ್ ನಾಪತ್ತೆಯಾದ ವ್ಯಕ್ತಿ; ಬ್ರಹ್ಮಾವರ ಠಾಣೆಯಲ್ಲಿ ಕೇಸ್!