HomeLOCALMangaluru : ಪಣಂಬೂರು ಬಳಿ ಚರಂಡಿಗೆ ಪಲ್ಟಿಯಾದ ಎಕ್ಸ್‌ಪ್ರೆಸ್ ಬಸ್; 50 ಪ್ರಯಾಣಿಕರು ಪಾರು!

Mangaluru : ಪಣಂಬೂರು ಬಳಿ ಚರಂಡಿಗೆ ಪಲ್ಟಿಯಾದ ಎಕ್ಸ್‌ಪ್ರೆಸ್ ಬಸ್; 50 ಪ್ರಯಾಣಿಕರು ಪಾರು!

ಮಂಗಳೂರು : ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಎಂಸಿಎಫ್ (MCF) ಸಮೀಪ ಶುಕ್ರವಾರ ಮುಂಜಾನೆ ಸಂಭವಿಸಿದೆ. ಬಸ್‌ನಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದು, ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಅಪಘಾತದ ತೀವ್ರತೆಗೆ ಬಸ್ ಚರಂಡಿಗೆ ಮಗುಚಿ ಬಿದ್ದಿದ್ದರೂ, ಬೆಳ್ಮಣ್ ನಿವಾಸಿ ಆದಿತ್ಯ ಎಂಬ ಪ್ರಯಾಣಿಕನಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದ ಎಲ್ಲಾ 50ಕ್ಕೂ ಹೆಚ್ಚು ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಪಾರಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಂಗಳೂರು ಉತ್ತರ (ಸುರತ್ಕಲ್) ಸಂಚಾರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸಾರ್ವಜನಿಕರ ಸಹಯೋಗದೊಂದಿಗೆ ಬಸ್‌ನೊಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ರಕ್ಷಿಸಿ ಹೊರತರಲಾಯಿತು. ಈ ಅವಘಡಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಯಾವುದೇ ಅಧಿಕೃತ ಪ್ರಕರಣ ದಾಖಲಾಗಿಲ್ಲ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿ :  Kasargod : ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಸಿಲುಕಿ ಆಟವಾಡುತ್ತಿದ್ದ 11 ವರ್ಷದ ಬಾಲಕ ಸಾವು!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments