ಮಂಗಳೂರು : ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಆಗಸ್ಟ್ ತಿಂಗಳಲ್ಲಿ ಕಳ್ಳರ ಹಾವಳಿ ತೀವ್ರಗೊಂಡಿದ್ದು, ಮನೆ, ದೇವಸ್ಥಾನ ಹಾಗೂ ದೈವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳವು ಮತ್ತು ಕಳ್ಳತನದ ಯತ್ನ ಪ್ರಕರಣಗಳು ಸರಣಿಯಾಗಿ ನಡೆದಿವೆ. ಮೂಲ್ಕಿ, ಉಳ್ಳಾಲ, ಕೊಣಾಜೆ, ಸುರತ್ಕಲ್ ಮತ್ತು ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಂದೇ ತಿಂಗಳಲ್ಲಿ ಸುಮಾರು 10 ಪ್ರಕರಣಗಳು ದಾಖಲಾಗಿದ್ದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.
ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಹಾಗೂ ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ಕಳ್ಳತನ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬೀಟ್ ಹಾಗೂ ರಾತ್ರಿ ಗಸ್ತು ಹೆಚ್ಚಿಸಿದ್ದು, ಸಾರ್ವಜನಿಕ ಸುರಕ್ಷತೆಗಾಗಿ “ಲಾಕ್ಡ್ ಹೌಸ್ ಬೀಟ್ ಸಿಸ್ಟಮ್” (Locked House Beat System) ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಊರಿಗೆ ತೆರಳುವ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿ ನೀಡಿದರೆ, ಅಂತಹ ಮನೆಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗುವುದು ಎಂದು ತಿಳಿಸಿರುವ ಪೊಲೀಸರು, ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ ಕೂಡಲೇ ಮಾಹಿತಿ ನೀಡುವಂತೆ ವಿನಂತಿಸಿದ್ದಾರೆ.
ಇದನ್ನು ಓದಿ : Mangaluru : ಮಿಂಚಿನ ಕಾರ್ಯಾಚರಣೆ ಮುಂದುವರಿಕೆ; ನಕಲಿ ಔಷಧ, ಕಲಬೆರಕೆ ಆಹಾರ ಮಾರಾಟಗಾರರಿಗೆ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ!