Homeತಾಜಾ ಸುದ್ದಿBantwal : ವಿಟ್ಲದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; 6 ಪ್ರತ್ಯೇಕ ಪೋಕ್ಸೋ...

Bantwal : ವಿಟ್ಲದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; 6 ಪ್ರತ್ಯೇಕ ಪೋಕ್ಸೋ ಪ್ರಕರಣ ದಾಖಲು.

ಬಂಟ್ವಾಳ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನೊಬ್ಬ ನೀಡಿದ ದೂರಿನನ್ವಯ 2026ರ ಫೆಬ್ರವರಿಯಿಂದ ಆಗಸ್ಟ್ ನಡುವಿನ ಅವಧಿಯಲ್ಲಿ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಆರು ಜನರ ವಿರುದ್ಧ ಆರು ಪ್ರತ್ಯೇಕ ಪೋಕ್ಸೋ (POCSO) ಪ್ರಕರಣಗಳು ದಾಖಲಾಗಿವೆ.

ಬಾಲಕನು ಸೆಪ್ಟೆಂಬರ್ 4ರಂದು ನೀಡಿದ ದೂರಿನಲ್ಲಿ ಜವಾದ್, ಶಾಹಿದ್, ರಿಯಾಜ್ ಅಲಿಯಾಸ್ ಅಬ್ದುಲ್ ಗಫೂರ್ ಹಾಗೂ ಇನ್ನಿತರ ಮೂವರು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾನೆ. ಈ ದೂರಿನ ಆಧಾರದ ಮೇಲೆ ವಿಟ್ಲ ಪೊಲೀಸರು ಪೋಕ್ಸೋ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ (Crime Nos. 185/2026 ರಿಂದ 190/2026) ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸರು ಪ್ರಮುಖ ಆರೋಪಿಗಳಾದ ಜವಾದ್, ಶಾಹಿದ್ ಮತ್ತು ರಿಯಾಜ್ ಅಲಿಯಾಸ್ ಅಬ್ದುಲ್ ಗಫೂರ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಬಂಧಿತ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದನ್ನು ಓದಿ : Puttur : ದರ್ಬೆ ಗಲಾಟೆ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ – 10 ಮಂದಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments