HomeLOCALMangaluru : ನ್ಯಾಯಾಲಯಕ್ಕೆ ಹಾಜರಾಗದೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!

Mangaluru : ನ್ಯಾಯಾಲಯಕ್ಕೆ ಹಾಜರಾಗದೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!

ಮಂಗಳೂರು : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಳ್ಳಾಲ ಮುಕ್ಕಚ್ಚೇರಿ ಕಿಲೇರಿಯಾ ನಗರ ನಿವಾಸಿ ಅಷ್ಫಾಕ್ (34) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳೂರಿನ 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೂ, ಆರೋಪಿ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ಆತನ ವಿರುದ್ಧ ಎಲ್‌ಪಿಸಿ (LPC) ವಾರಂಟ್ ಹೊರಡಿಸಲಾಗಿತ್ತು.

ಸೆಪ್ಟೆಂಬರ್ 8ರಂದು ಖಚಿತ ಮಾಹಿತಿ ಆಧರಿಸಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments