Homeತಾಜಾ ಸುದ್ದಿPuttur : ನೆಲ್ಯಾಡಿಯಲ್ಲಿ ತಲೆಮರೆಸಿಕೊಂಡಿದ್ದ ಪೋಕ್ಸೋ (POCSO) ಆರೋಪಿ ಬಂಧನ!

Puttur : ನೆಲ್ಯಾಡಿಯಲ್ಲಿ ತಲೆಮರೆಸಿಕೊಂಡಿದ್ದ ಪೋಕ್ಸೋ (POCSO) ಆರೋಪಿ ಬಂಧನ!

ಪುತ್ತೂರು : ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೌಕ್ರಾಡಿ ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ.

ಪೋಕ್ಸೋ ಪ್ರಕರಣ ಎದುರಿಸುತ್ತಿದ್ದ ರಮೇಶ್, ನ್ಯಾಯಾಲಯದಲ್ಲಿ ವಿಚಾರಣೆಗೆ ಪದೇ ಪದೇ ಗೈರುಹಾಜರಾಗುತ್ತಿದ್ದನು. ಕೋರ್ಟ್ ನೀಡಿದ್ದ ಸಮನ್ಸ್ ಹಾಗೂ ವಿಚಾರಣೆಗಳಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದರಿಂದ ಆತನ ವಿರುದ್ಧ ನ್ಯಾಯಾಲಯ ವಾರಂಟ್ ಜಾರಿಗೊಳಿಸಿತ್ತು.

ಸೆಪ್ಟೆಂಬರ್ 10ರ ಗುರುವಾರದಂದು ಕಾರ್ಯಪ್ರವೃತ್ತರಾದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ದಯಾನಂದ ಹಾಗೂ ಕಾನ್‌ಸ್ಟೇಬಲ್ ರವಿರಾಜ್ ಅವರ ತಂಡ, ಖಚಿತ ಮಾಹಿತಿ ಮೇರೆಗೆ ನೆಲ್ಯಾಡಿಯಲ್ಲಿ ಆರೋಪಿ ರಮೇಶ್‌ ಗಾಗಿ ಶೋಧ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನು ಓದಿ : Udupi : ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ನೀಡಿ ಜಾಮೀನು ಪಡೆಯಲು ಯತ್ನ – ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments