Homeತಾಜಾ ಸುದ್ದಿSowjanya rape-murder case : ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ!

Sowjanya rape-murder case : ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ!

ಮಂಗಳೂರು : ನಾಡಿನಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣವನ್ನು ಹೊಸದಾಗಿ ಮರು ತನಿಖೆ ನಡೆಸುವಂತೆ ಸೂಚಿಸಿರುವ ಸರ್ವೋಚ್ಚ ನ್ಯಾಯಾಲಯ, ತನಿಖೆಗೆ ಹೊಸ ತಂಡ (SIT) ರಚಿಸುವ ಸಾಧ್ಯತೆಗಳ ಬಗ್ಗೆಯೂ ಸೂಚನೆ ನೀಡಿದೆ.

೨೦೧೨ರಲ್ಲಿ ನಡೆದ ಈ ಭೀಕರ ಘಟನೆಯಲ್ಲಿ ಸಂತೋಷ್ ರಾವ್ ಎಂಬಾತನನ್ನು ಆರೋಪಿ ಎಂದು ಬಂಧಿಸಲಾಗಿತ್ತು. ಆದರೆ, ೨೦೨೩ರಲ್ಲಿ ಸಾಕ್ಷ್ಯಾಧಾರಗಳ ಅಭಾವದಿಂದ ನ್ಯಾಯಾಲಯ ಆತನನ್ನು ಖುಲಾಸೆಗೊಳಿಸಿತ್ತು. ತನಿಖೆ ನಡೆಸಿದ ಅಧಿಕಾರಿಗಳ ಲೋಪದಿಂದಾಗಿ ಅಸಲಿ ಅಪರಾಧಿಗಳು ತಪ್ಪಿಸಿಕೊಂಡಿದ್ದಾರೆ ಎಂದು ಸೌಜನ್ಯ ಕುಟುಂಬಸ್ಥರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್ ಈ ಮರು ತನಿಖೆಗೆ ಆದೇಶ ನೀಡಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದ್ದು, ನೈಜ ಆರೋಪಿಗಳಿಗೆ ಶಿಕ್ಷೆಯಾಗುವ ನಿರೀಕ್ಷೆ ಮೂಡಿಸಿದೆ.

ಇದನ್ನು ಓದಿ : Uppinangady : ಪತಿ-ಪತ್ನಿ ಜಗಳ ; ನಾದಿನಿಯ ಮಗುವನ್ನು ಬಾವಿಗೆ ಎಸೆದು ಕೊಂದ ತಾಯಿ!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments