Home LOCAL Uppinangady | ಉಪ್ಪಿನಂಗಡಿ ಸಮೀಪ ಭೀಕರ ಅಪಘಾತ: ಕಾರು-ಬೈಕ್ ಢಿಕ್ಕಿ

Uppinangady | ಉಪ್ಪಿನಂಗಡಿ ಸಮೀಪ ಭೀಕರ ಅಪಘಾತ: ಕಾರು-ಬೈಕ್ ಢಿಕ್ಕಿ

0
70
Uppinangady | Terrible accident near Uppinangadi: Car-bike collision

ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಕಲ್ಲೇರಿ ಎಂಬಲ್ಲಿ ಸೋಮವಾರ (ಮಾರ್ಚ್ 16, 2026) ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇಸ್ಮಾಯಿಲ್ ಎಂಬವರು ತಮ್ಮ ಮಗಳು ಸಾಜಿರಾ ಮತ್ತು 5 ವರ್ಷದ ಮೊಮ್ಮಗಳು ಸುಹೈರಾಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಹೋಗುತ್ತಿದ್ದಾಗ, ಎದುರುಗಡೆಯಿಂದ ಬಂದ ವೇಣೂರು ಮೂಲದ ಶಿವಪ್ರಸಾದ್ ಎಂಬವರು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.

5 ವರ್ಷದ ಬಾಲಕಿ ಸಾವು: ಈ ಅಪಘಾತದಲ್ಲಿ 5 ವರ್ಷದ ಬಾಲಕಿ ಸುಹೈರಾ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ರಾತ್ರಿ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಾಲಕಿಯ ತಾಯಿ ಸಾಜಿರಾ (33) ಮತ್ತು ಅಜ್ಜ ಇಸ್ಮಾಯಿಲ್ (60) ಅವರಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸ್ ಕ್ರಮ: ಅಪಘಾತಕ್ಕೆ ಸಂಬಂಧಿಸಿದಂತೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

LEAVE A REPLY

Please enter your comment!
Please enter your name here

error: Content is protected !!