Saturday, April 11, 2026
HomeLOCALBantwal : ಮಾತು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ವೇದಿಕೆಯಲ್ಲೇ ಕುಸಿದು ಬಿದ್ದು ನಿರೂಪಕ ಸಾವು

Bantwal : ಮಾತು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ವೇದಿಕೆಯಲ್ಲೇ ಕುಸಿದು ಬಿದ್ದು ನಿರೂಪಕ ಸಾವು

ಬಂಟ್ವಾಳ : ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಏಪ್ರಿಲ್ 10ರಂದು ರಾತ್ರಿ ಮದರಂಗಿ ಕಾರ್ಯಕ್ರಮವೊಂದು ನಡೆಯುತ್ತಿದ್ದ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ಯುವ ನಿರೂಪಕರೊಬ್ಬರು ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ.

ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿತ್ (32) ಮೃತಪಟ್ಟ ದುರ್ದೈವಿ. ಇವರು ಸ್ಥಳೀಯವಾಗಿ ಉತ್ತಮ ನಿರೂಪಕರಾಗಿ ಗುರುತಿಸಿಕೊಂಡಿದ್ದರು. ನಾಯಿಲದಲ್ಲಿರುವ ತಮ್ಮ ಸಂಬಂಧಿಕರ ಮನೆಯ ಮದರಂಗಿ ಕಾರ್ಯಕ್ರಮದಲ್ಲಿ ಅಶ್ವಿತ್ ಅತ್ಯಂತ ಉತ್ಸಾಹದಿಂದ ನಿರೂಪಣೆ ಮಾಡುತ್ತಿದ್ದರು. ವೇದಿಕೆ ಏರಿ ಮಾತು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಅವರು ತೀವ್ರ ಅಸ್ವಸ್ಥಗೊಂಡು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.

ಅಶ್ವಿತ್ ಕುಸಿದು ಬೀಳುತ್ತಿದ್ದಂತೆ ತಕ್ಷಣವೇ ಅವರನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ತೀವ್ರ ಹೃದಯಾಘಾತವೇ ಈ ಸಾವಿಗೆ ಕಾರಣ ಎನ್ನಲಾಗಿದೆ. ಸಂಭ್ರಮದಿಂದ ನಡೆಯುತ್ತಿದ್ದ ಮದುವೆ ಮನೆಯ ಮದರಂಗಿ ಕಾರ್ಯಕ್ರಮವು ಈ ಘಟನೆಯಿಂದಾಗಿ ಕ್ಷಣಾರ್ಧದಲ್ಲಿ ಶೋಕಸಾಗರವಾಗಿ ಮಾರ್ಪಟ್ಟಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!