Tuesday, April 21, 2026
Homeತಾಜಾ ಸುದ್ದಿBengaluru : ಕ್ರಿಪ್ಟೋ-ಲಿಂಕ್ಡ್ ಪಿಎಂಎಲ್ಎ ಪ್ರಕರಣದಲ್ಲಿ ಕರ್ನಾಟಕ ಕಾಂಗ್ರೆಸ್ ಶಾಸಕರ ಪುತ್ರರು ಮತ್ತು ಇತರರ ಮೇಲೆ...

Bengaluru : ಕ್ರಿಪ್ಟೋ-ಲಿಂಕ್ಡ್ ಪಿಎಂಎಲ್ಎ ಪ್ರಕರಣದಲ್ಲಿ ಕರ್ನಾಟಕ ಕಾಂಗ್ರೆಸ್ ಶಾಸಕರ ಪುತ್ರರು ಮತ್ತು ಇತರರ ಮೇಲೆ ಇಡಿ ದಾಳಿ

ಬೆಂಗಳೂರು : ಕ್ರಿಪ್ಟೋ ಕರೆನ್ಸಿ ಲಿಂಕ್ಡ್ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸೋಮವಾರ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರರಾದ ಮೊಹಮ್ಮದ್ ನಲಪಾಡ್ ಮತ್ತು ಉಮರ್ ಫಾರೂಕ್ ನಲಪಾಡ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಭೀಕರ ದಾಳಿ ನಡೆಸಿದ್ದಾರೆ.


ಕ್ರಿಪ್ಟೋ ಹ್ಯಾಕರ್ ಲಿಂಕ್:
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿ ನಗರದ ಸುಮಾರು 12ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ಕಾರ್ಯ ನಡೆಯುತ್ತಿದೆ. ಶಾಸಕರ ಪುತ್ರರಷ್ಟೇ ಅಲ್ಲದೆ, ಕುಖ್ಯಾತ ಕ್ರಿಪ್ಟೋ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯ ನಿವಾಸದ ಮೇಲೂ ದಾಳಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ಹಿನ್ನೆಲೆ ಏನು?: 2017ರಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಿ ಬಿಟ್‌ಕಾಯಿನ್‌ಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಶ್ರೀಕಿ ಮತ್ತು ಆತನ ಸಹಚರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಹ್ಯಾಕಿಂಗ್ ಮೂಲಕ ಗಳಿಸಿದ ಅಕ್ರಮ ಹಣದ (Proceeds of Crime) ಫಲಾನುಭವಿಗಳು ಮೊಹಮ್ಮದ್ ನಲಪಾಡ್ ಮತ್ತು ಉಮರ್ ಫಾರೂಕ್ ನಲಪಾಡ್ ಎಂದು ಶಂಕಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇಡಿ ತನಿಖೆ ಚುರುಕುಗೊಳಿಸಿದೆ.

ಬೆಂಗಳೂರಿನ ರಾಜಕೀಯ ವಲಯದಲ್ಲಿ ಈ ದಾಳಿಯು ಭಾರಿ ಸಂಚಲನ ಮೂಡಿಸಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!