Tuesday, April 21, 2026
Homeತಾಜಾ ಸುದ್ದಿUdupi : ಹಳೆಯ ಕೆಎಂಎಫ್ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ; ಒಂದು ಗಂಟೆಯ ಕಾರ್ಯಾಚರಣೆಯ...

Udupi : ಹಳೆಯ ಕೆಎಂಎಫ್ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ; ಒಂದು ಗಂಟೆಯ ಕಾರ್ಯಾಚರಣೆಯ ನಂತರ ನಂದಿಸಲಾಗಿದೆ

ಮಣಿಪಾಲ/ಉಡುಪಿ: ಉಡುಪಿ ಜಿಲ್ಲೆಯ ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ (KMF) ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಇಂದು (ಮಂಗಳವಾರ) ಬೆಳಿಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್, ಅಗ್ನಿಶಾಮಕ ದಳದ ಸಿಬ್ಬಂದಿ ಸಕಾಲಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಇಂದು ಬೆಳಿಗ್ಗೆ ಸುಮಾರು 11 ಗಂಟೆಯ ಸುಮಾರಿಗೆ ಘಟಕದಲ್ಲಿ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಹಾರಿದ ಕಿಡಿಗಳು ಹತ್ತಿರದಲ್ಲಿದ್ದ ಆಯಿಲ್ (ತೈಲ) ಮೇಲೆ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಜ್ವಾಲೆಗಳು ಕ್ಷಣಾರ್ಧದಲ್ಲಿ ಘಟಕದ ಬಾಯ್ಲರ್ ವಿಭಾಗಕ್ಕೂ ವ್ಯಾಪಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ವಿಷಯ ತಿಳಿಯುತ್ತಿದ್ದಂತೆಯೇ ಉಡುಪಿಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಸುಮಾರು ಒಂದು ಗಂಟೆಗಳ ಕಾಲ ಸತತ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು. ಈ ಅಗ್ನಿ ಅವಘಡದಿಂದಾಗಿ ಘಟಕದ ಯಂತ್ರೋಪಕರಣಗಳಿಗೆ ಗಣನೀಯ ಪ್ರಮಾಣದ ಹಾನಿಯಾಗಿದೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!