Home LOCAL Manipal : ಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ!

Manipal : ಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ!

0
55

ಮಣಿಪಾಲ: ಮಣಿಪಾಲದ ಟೈಗರ್ ಸರ್ಕಲ್ ಬಳಿ ಏಪ್ರಿಲ್ 20ರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕಾರ್ತಿಕೇಯ್ ಶರ್ಮಾ (21) ಎಂದು ಗುರುತಿಸಲಾಗಿದೆ.


ಈಶ್ವರ ನಗರದಿಂದ ಸಿಂಡಿಕೇಟ್ ಸರ್ಕಲ್ ಕಡೆಗೆ ಅತೀವೇಗವಾಗಿ ಚಲಿಸುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮಣಿಪಾಲ ಬಸ್ ನಿಲ್ದಾಣಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆಗೆ ಬಿದ್ದಿದ್ದು, ಚಾಲಕ ಕಾರ್ತಿಕೇಯ್ ಶರ್ಮಾ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಕಾರಿನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಹೆರ್ಶ್ ಹಾರ್ಡಿಂಗ್ ಎಂಬುವವರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

error: Content is protected !!