Monday, May 11, 2026
Homeತಾಜಾ ಸುದ್ದಿBeltangady : 2017ರ ಹೆದ್ದಾರಿ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Beltangady : 2017ರ ಹೆದ್ದಾರಿ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ, ಏಪ್ರಿಲ್ 29 : 2017ರಲ್ಲಿ ಬೆಳ್ತಂಗಡಿ ತಾಲೂಕಿನ ರೇಖ್ಯಾ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯೊಂದನ್ನು ಅಡ್ಡಗಟ್ಟಿ ದರೋಡೆ ಮಾಡಲಾಗಿತ್ತು. ಈ ಕೃತ್ಯದ ನಂತರ ಪ್ರಕರಣದ ಎರಡನೇ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದನು. ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರಾಗಲು ವಿಫಲನಾಗಿದ್ದ ಈತನ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದರು.

ಬಂಧಿತ ಆರೋಪಿಯನ್ನು ಬೆಂಗಳೂರಿನ ಬನಶಂಕರಿ ನಿವಾಸಿ ಮಣಿ ಯಾನೆ ಮಣಿಕಂಠ (32) ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕ ಸಮರ್ಥ ಆರ್. ಗಣಿಗೆರೆ ನೇತೃತ್ವದ ತಂಡವು ಖಚಿತ ಮಾಹಿತಿಯ ಮೇರೆಗೆ ಬೆಂಗಳೂರಿನ ಬನಶಂಕರಿ ಮಾರುಕಟ್ಟೆ ಬಳಿ ದಾಳಿ ನಡೆಸಿ ಆರೋಪಿಯನ್ನು ಯಶಸ್ವಿಯಾಗಿ ಸೆರೆಹಿಡಿದಿದೆ.

ಬಂಧಿತ ಆರೋಪಿಯನ್ನು ಪೊಲೀಸರು ಪುತ್ತೂರು ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ದೀರ್ಘಕಾಲದ ಬಳಿಕ ಆರೋಪಿ ಸಿಕ್ಕಿಬಿದ್ದಿರುವುದು ಪೊಲೀಸ್ ಇಲಾಖೆಯ ಯಶಸ್ವಿ ಕಾರ್ಯಾಚರಣೆಗೆ ಸಾಕ್ಷಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!