ಭೋಪಾಲ್ : ಮಧ್ಯಪ್ರದೇಶದ ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಸುಮಾರು 8.30ರ ವೇಳೆಗೆ ಈ ಭೀಕರ ದುರ್ಘಟನೆ ನಡೆದಿದೆ. ಈರುಳ್ಳಿ ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ 35 ಮಂದಿ ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ಟ್ರಕ್, ಅತಿವೇಗದಿಂದ ಬಂದು ಎದುರುಗಡೆಯಿಂದ ಬರುತ್ತಿದ್ದ ಎಸ್‌ಯುವಿ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ರಭಸಕ್ಕೆ ಟ್ರಕ್ ಮೂರು-ನಾಲ್ಕು ಬಾರಿ ಉರುಳಿ ಬಿದ್ದು ಮಗುಚಿ ಬಿದ್ದಿದೆ.
ಧಾರ್ ಜಿಲ್ಲೆಯ ಚಿಕಾಲಿಯಾ ಪಥದ ಬಳಿ ನಡೆದ ಈ ಅಪಘಾತದಲ್ಲಿ ಸ್ಥಳದಲ್ಲೇ 12 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು ಈ ಅಪಘಾತದಲ್ಲಿ ಒಟ್ಟು 23 ಮಂದಿ ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ 10 ಮಂದಿಯನ್ನು ಇಂದೋರ್‌ನ ಎಂವೈ ಆಸ್ಪತ್ರೆಗೆ ದಾಖಲಿಸಿದ್ದರೆ, ಉಳಿದ 11 ಮಂದಿಗೆ ಧಾರ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತಕ್ಕೀಡಾದ ಪಿಕಪ್ ಟ್ರಕ್‌ನಲ್ಲಿ ಒಟ್ಟು 35 ಮಂದಿ ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಅತಿವೇಗದಿಂದ ಬಂದ ಟ್ರಕ್ ಎದುರುಗಡೆಯಿಂದ ಬರುತ್ತಿದ್ದ ಎಸ್‌ಯುವಿ ವಾಹನಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ . ಟ್ರಕ್ ಮೂರು-ನಾಲ್ಕು ಬಾರಿ ಉರುಳಿ ಮಗುಚಿ ಬಿದ್ದಿದೆ. ಈ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ 12 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾತ್ರಿ 8.30ಕ್ಕೆ ನಡೆದ ಈ ದುರ್ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಘೋಷಿಸಿದ್ದಾರೆ. ರಾಜ್ಯ ಸರ್ಕಾರವೂ ಕೂಡ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಭರವಸೆ ನೀಡಿದೆ.

