HomeLOCALUllal : ಉಳ್ಳಾಲ ನಗರಸಭೆ ಮಾಜಿ ಉಪಾಧ್ಯಕ್ಷೆ ಭವಾನಿ ಕಾಪಿಕಾಡ್ ನಿಧನ

Ullal : ಉಳ್ಳಾಲ ನಗರಸಭೆ ಮಾಜಿ ಉಪಾಧ್ಯಕ್ಷೆ ಭವಾನಿ ಕಾಪಿಕಾಡ್ ನಿಧನ

 ಉಳ್ಳಾಲ :  ಉಳ್ಳಾಲ ನಗರಸಭೆಯ ಮಾಜಿ ಉಪಾಧ್ಯಕ್ಷೆ ಭವಾನಿ ಕಾಪಿಕಾಡ್ (65) ಅವರು ಅಲ್ಪಕಾಲದ ಅನಾರೋಗ್ಯದಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾದರು.

ತೊಕ್ಕೊಟ್ಟು ನಿವಾಸಿಯಾದ ಇವರು ಕಾಪಿಕಾಡು ವಾರ್ಡ್‌ನಿಂದ ಎರಡು ಬಾರಿ ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದರು. ಅಲ್ಲದೆ, ನಗರಸಭೆಯ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು.

ಬಿಜೆಪಿಯ ಸಕ್ರಿಯ ಮಹಿಳಾ ಸದಸ್ಯೆಯಾಗಿದ್ದ ಇವರು ಅವಿವಾಹಿತರಾಗಿದ್ದರು. ಬಂಡಿಕೊಟ್ಟದ ಕೊರ್ದಬ್ಬು ದೈವಸ್ಥಾನ ಸಮಿತಿಯ ಸದಸ್ಯೆಯಾಗಿ ದೈವದ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ಸ್ಥಳೀಯ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments