Homeತಾಜಾ ಸುದ್ದಿBelthangady : ಡಾ. ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಮಾನಹಾನಿಕರ ಪೋಸ್ಟ್; ಗಿರೀಶ್ ಮಟ್ಟಣ್ಣವರ್ ವಿರುದ್ಧ...

Belthangady : ಡಾ. ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಮಾನಹಾನಿಕರ ಪೋಸ್ಟ್; ಗಿರೀಶ್ ಮಟ್ಟಣ್ಣವರ್ ವಿರುದ್ಧ FIR, ತನಿಖೆಗೆ ಹಾಜರಾಗಲು ನೋಟಿಸ್!

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಮತ್ತು ಮಾನಹಾನಿಕರ ಪೋಸ್ಟ್‌ಗಳನ್ನು ಹಂಚಿಕೊಂಡಿರುವ ಆರೋಪದ ಮೇಲೆ ಗಿರೀಶ್ ಮಟ್ಟಣ್ಣವರ್ ಎಂಬುವವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಎಂಬುವವರು ಈ ಕುರಿತು ದೂರು ನೀಡಿದ್ದಾರೆ.

ಗಿರೀಶ್ ಮಟ್ಟಣ್ಣವರ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸತ್ಯಕ್ಕೆ ದೂರವಾದ ಮತ್ತು ಗಂಭೀರ ಸ್ವರೂಪದ ಆರೋಪಗಳನ್ನು ಮಾಡುವ ಮೂಲಕ ಡಾ. ಹೆಗ್ಗಡೆಯವರ ವ್ಯಕ್ತಿತ್ವಕ್ಕೆ ಕುಂದುತರುವ ಪ್ರಯತ್ನ ನಡೆಸಿದ್ದಾರೆ. ಈ ಪೋಸ್ಟ್‌ಗಳು ಸಮಾಜದಲ್ಲಿ ಅವರ ಸ್ಥಾನಮಾನಕ್ಕೆ ಹಾನಿಯುಂಟು ಮಾಡುವುದಲ್ಲದೆ, ಜನರ ನಡುವೆ ವೈರತ್ವ ಮತ್ತು ದ್ವೇಷ ಮೂಡಿಸುವ ಉದ್ದೇಶ ಹೊಂದಿವೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಿಎನ್ಎಸ್ (BNS)-2023 ಸೆಕ್ಷನ್ 353(2) ರಡಿ ಏಪ್ರಿಲ್ 18ರಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿ ಗಿರೀಶ್ ಮಟ್ಟಣ್ಣವರ್ ಅವರು ಮೇ 7ರಂದು ಎಸ್‌ಐಟಿ (SIT) ಕಚೇರಿಗೆ ಹಾಜರಾಗಿರುವ ಮಾಹಿತಿ ತಿಳಿದು ಧರ್ಮಸ್ಥಳ ಪೊಲೀಸರು ನೇರವಾಗಿ ಅಲ್ಲಿಗೇ ತೆರಳಿ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ಸ್ವೀಕರಿಸಿದ ಒಂದು ವಾರದೊಳಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆಯಲ್ಲಿ ಪಾಲ್ಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಇದನ್ನು ಓದಿ :  Madikeri : ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ; ಸಾವಿನಲ್ಲೂ ಸಮಯಪ್ರಜ್ಞೆ ಮೆರೆದು ಪ್ರಯಾಣಿಕರ ಪ್ರಾಣ ಉಳಿಸಿದ ಸಾಹಸಿ!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments