Monday, May 11, 2026
Homeತಾಜಾ ಸುದ್ದಿPuttur : ಗೋಳಿತ್ತೊಟ್ಟು ಬಳಿ ಕಾರು ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು, ಪತ್ನಿ ಗಂಭೀರ

Puttur : ಗೋಳಿತ್ತೊಟ್ಟು ಬಳಿ ಕಾರು ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು, ಪತ್ನಿ ಗಂಭೀರ

ಪುತ್ತೂರು, ಮೇ 11: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ನಿವಾಸಿ ಸದಾನಂದ ಆಚಾರ್ಯ (59) ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ದುರ್ದೈವಿ. ಇವರು ಅರಸಿನಮಕ್ಕಿಯ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಯೋಗಿಯಾಗಿದ್ದರು. ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಇವರ ಪತ್ನಿ ಉಷಾ ಅವರಿಗೆ ತೀವ್ರವಾದ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಂಪತಿಗಳು ಅರಸಿನಮಕ್ಕಿಯಿಂದ ಕೊಕ್ಕಡ ಮಾರ್ಗವಾಗಿ ಉಪ್ಪಿನಂಗಡಿಗೆ ತೆರಳುತ್ತಿದ್ದರು. ಇವರು ಗೋಳಿತೊಟ್ಟು ಜಂಕ್ಷನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಪ್ರವೇಶಿಸುತ್ತಿದ್ದ ವೇಳೆ, ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಇವರ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಸದಾನಂದ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ : Belthangady : ಪವನ್ ಕ್ಯಾಂಟೀನ್ ಮೇಲೆ ಪೊಲೀಸ್ ದಾಳಿ ; ಮೂವರ ಬಂಧನ!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!