Home ತಾಜಾ ಸುದ್ದಿ NEET UG 2026 Re-exam Date : ಪೇಪರ್ ಲೀಕ್ ಬೆನ್ನಲ್ಲೇ ಮರುಪರೀಕ್ಷೆಯ ದಿನಾಂಕ ಅನೌನ್ಸ್...

    NEET UG 2026 Re-exam Date : ಪೇಪರ್ ಲೀಕ್ ಬೆನ್ನಲ್ಲೇ ಮರುಪರೀಕ್ಷೆಯ ದಿನಾಂಕ ಅನೌನ್ಸ್ ; NTA ಮಹತ್ವದ ನಿರ್ಧಾರ!

    0
    40

    ನವದೆಹಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನೀಟ್ (UG) 2026ರ ಮರುಪರೀಕ್ಷೆಯನ್ನು ಜೂನ್ 21ರಂದು ನಡೆಸುವುದಾಗಿ ಘೋಷಿಸಿದೆ. ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ 2026ರ ನೀಟ್ ಪರೀಕ್ಷೆಯನ್ನು ಈ ಹಿಂದೆ ರದ್ದುಗೊಳಿಸಲಾಗಿತ್ತು. ಈಗ ಭಾರತ ಸರ್ಕಾರದ ಅನುಮೋದನೆಯೊಂದಿಗೆ ಹೊರಡಿಸಲಾದ ಅಧಿಸೂಚನೆಯ ಪ್ರಕಾರ, ಅರ್ಹ ವಿದ್ಯಾರ್ಥಿಗಳಿಗೆ ಜೂನ್ 21ರಂದು ಮತ್ತೊಮ್ಮೆ ಪರೀಕ್ಷೆ ಎದುರಿಸಲು ಅವಕಾಶ ಕಲ್ಪಿಸಲಾಗಿದೆ.

    ಈ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದವು ಭಾರತದ ಅತಿ ದೊಡ್ಡ ಪ್ರವೇಶ ಪರೀಕ್ಷೆಗಳಲ್ಲಿ ಒಂದಾದ ನೀಟ್ ಪರೀಕ್ಷೆಯ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಕಳವಳಗಳನ್ನು ಹುಟ್ಟುಹಾಕಿತ್ತು. ಪರೀಕ್ಷೆ ರದ್ದಾದ ಬೆನ್ನಲ್ಲೇ ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ತೀವ್ರ ಪ್ರತಿಭಟನೆಗಳು ನಡೆದಿದ್ದವು. ಈ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ, ಪ್ರಕರಣಕ್ಕೆ ಸಂಬಂಧಿಸಿದ ಐವರು ಪ್ರಮುಖ ಆರೋಪಿಗಳನ್ನು ಈಗಾಗಲೇ ಏಳು ದಿನಗಳ ಕಾಲ ತನ್ನ ಕಸ್ಟಡಿಗೆ ಪಡೆದುಕೊಂಡಿದೆ.

    ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿರುವ ಮಾಫಿಯಾವನ್ನು ಮಟ್ಟಹಾಕಲು ಸರ್ಕಾರ ಮುಂದಾಗಿದ್ದು, ಜೂನ್ 21ರಂದು ನಡೆಯಲಿರುವ ಮರುಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಿನ ಭದ್ರತೆಯೊಂದಿಗೆ ನಡೆಸಲು ಎನ್‌ಟಿಎ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

    ಇದನ್ನು ಓದಿ : Ullal : ರಸ್ತೆಯಲ್ಲಿ ಮೀನಿನ ಎಣ್ಣೆ ಸೋರಿಕೆ, ಸವಾರರು ಪಲ್ಟಿ! ಕ್ಯಾಂಟರ್ ತಡೆದು ಸಾರ್ವಜನಿಕರಿಂದ ಭಾರಿ ಪ್ರತಿಭಟನೆ

    LEAVE A REPLY

    Please enter your comment!
    Please enter your name here

    error: Content is protected !!