Home ತಾಜಾ ಸುದ್ದಿ Bangalore : ಲವ್​ ಜಿಹಾದ್ ಆರೋಪ​, ಮದುವೆಯಾಗಲ್ಲ ಅಂದಿದ್ದಕ್ಕೆ ಹಿಂದೂ ನಟಿ ಮೇಲೆ ಹಲ್ಲೆ ಮಾಡಿದ...

    Bangalore : ಲವ್​ ಜಿಹಾದ್ ಆರೋಪ​, ಮದುವೆಯಾಗಲ್ಲ ಅಂದಿದ್ದಕ್ಕೆ ಹಿಂದೂ ನಟಿ ಮೇಲೆ ಹಲ್ಲೆ ಮಾಡಿದ ಜುಹೇದ್​!

    0
    50

    ಬೆಂಗಳೂರು (ಎ.16): ರಾಜ್ಯದಲ್ಲಿ ‘ಲವ್ ಜಿಹಾದ್’ (Love Jihad) ಪ್ರಕರಣಗಳು ಸರಣಿಯಾಗಿ ಸದ್ದು ಮಾಡುತ್ತಿರುವಾಗಲೇ,  ಬೆಂಗಳೂರಿನಲ್ಲಿ ಹಿಂದೂ ಯುವತಿಯೊಬ್ಬರ (Hindu Girl) ಮೇಲೆ ಅನ್ಯಕೋಮಿನ ಯುವಕನೊಬ್ಬ ಭೀಕರ ಹಲ್ಲೆ ನಡೆಸಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ನಟಿ ಮತ್ತು ಮಾಡೆಲ್ ಆಗಿರುವ ಯುವತಿ, ಆರೋಪಿಯ ಮದುವೆ ಪ್ರಸ್ತಾವನೆಯನ್ನು ನಿರಾಕರಿಸಿದ್ದಕ್ಕಾಗಿಯೇ ಈ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.


    ಸಂತ್ರಸ್ತ ಯುವತಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಜೊತೆಗೆ ಮಾಡೆಲಿಂಗ್ ಮತ್ತು ನಟನೆಯಲ್ಲೂ ತೊಡಗಿಸಿಕೊಂಡಿದ್ದಾರೆ. ಮಾಡೆಲಿಂಗ್ ಇಂಡಸ್ಟ್ರಿಯಲ್ಲಿದ್ದ ಆರೋಪಿ ಜುಹೇಬ್ (Juhaed) ಎಂಬಾತನೊಂದಿಗೆ ಯುವತಿಗೆ ಪರಿಚಯವಿತ್ತು. ಇಬ್ಬರೂ ಸ್ನೇಹಿತರಾಗಿದ್ದರು ಎನ್ನಲಾಗಿದೆ. ಆದರೆ, ಕಳೆದ 2024 ರಿಂದ ಜುಹೇಬ್ ಯುವತಿಯ ಹಿಂದೆ ಬಿದ್ದು, ತನ್ನನ್ನು ಮದುವೆಯಾಗುವಂತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಯುವತಿ ಆತನ ಮದುವೆ ಪ್ರಸ್ತಾವನೆಯನ್ನು ಕಡಾಖಂಡಿತವಾಗಿ ನಿರಾಕರಿಸಿದ್ದರು.

    ಮದುವೆಗೆ ಒಪ್ಪದಿದ್ದಕ್ಕೆ ಆಕ್ರೋಶಗೊಂಡ ಜುಹೇದ್, ಯುವತಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ, “ನೀನು ನನ್ನನ್ನು ಮದುವೆಯಾಗದಿದ್ದರೆ ನಿನ್ನನ್ನು ಕೊಲೆ ಮಾಡುತ್ತೇನೆ” ಎಂದು ಬಹಿರಂಗವಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡಿರುವ ಯುವತಿ, ತಮ್ಮ ಅಳಲನ್ನು ತೋಡಿಕೊಂಡಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು @KarnatakaPortfolio ಎಂಬ ಎಕ್ಸ್ (X) ಖಾತೆಯಲ್ಲೂ ಹಂಚಿಕೊಳ್ಳಲಾಗಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ.

     

    ಈ ಘಟನೆ ಬೆಂಗಳೂರಿನ ಫ್ರೇಜರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಯುವತಿಯ ಹಲ್ಲೆಯ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿನಲ್ಲೂ ‘ಲವ್ ಜಿಹಾದ್’ ಜಾಲ ಸಕ್ರಿಯವಾಗಿದೆ ಎಂಬ ಕಮೆಂಟ್‌ಗಳು ಹರಿದಾಡುತ್ತಿವೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿ ಜುಹೇದ್‌ನ ಬಂಧನಕ್ಕೆ ಬಲೆ ಬೀಸಿದ್ದಾರೆ.

    LEAVE A REPLY

    Please enter your comment!
    Please enter your name here

    error: Content is protected !!