Homeತಾಜಾ ಸುದ್ದಿBantwal : ಸಿದ್ದಕಟ್ಟೆಯಲ್ಲಿ ಯುವಕನಿಗೆ ಚಾಕುವಿನಿಂದ ಇರಿತ!

Bantwal : ಸಿದ್ದಕಟ್ಟೆಯಲ್ಲಿ ಯುವಕನಿಗೆ ಚಾಕುವಿನಿಂದ ಇರಿತ!

Bantwal : ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಜಂಕ್ಷನ್‌ನಲ್ಲಿ ಭಾನುವಾರ ಅಕ್ಟೋಬರ್ 18 ರ ರಾತ್ರಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ದಾರುಣ ಘಟನೆ ವರದಿಯಾಗಿದೆ.

ಗಾಯಗೊಂಡ ಯುವಕನನ್ನು ಸಿದ್ದಕಟ್ಟೆ ಸಮೀಪದ ಮಂಚಕಲ್ಲು, ಮೇಲುಗುಡ್ಡೆ ನಿವಾಸಿ ಪ್ರಕಾಶ್ ಪೂಜಾರಿ (30) ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಚಿಕಿತ್ಸೆಗಾಗಿ ಮೂಡಬಿದರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸ್ಥಳೀಯ ಯುವಕರ ಗುಂಪೊಂದು ಕ್ಷುಲ್ಲಕ ವೈಯಕ್ತಿಕ ಕಾರಣಕ್ಕಾಗಿ ಪ್ರಕಾಶ್ ಪೂಜಾರಿ ಅವರ ಮೇಲೆ ಚಾಕುವಿನಿಂದ ಇರಿದಿದ್ದಾರೆ ಎಂದು ಶಂಕಿಸಲಾಗಿದೆ. ಹಲ್ಲೆ ನಡೆಸಿದ ದುಷ್ಕರ್ಮಿಗಳು ಆತನಿಗೆ ಪರಿಚಿತರೇ ಆಗಿದ್ದರು ಎನ್ನಲಾಗುತ್ತಿದೆಯಾದರೂ, ಈ ಕೃತ್ಯಕ್ಕೆ ನಿಖರವಾದ ಕಾರಣವೇನು ಎಂಬುದು ಇನ್ನುಷ್ಟೇ ತಿಳಿದುಬರಬೇಕಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಇದನ್ನು ಓದಿ  : Bantwal : ಸಿದ್ದಕಟ್ಟೆಯಲ್ಲಿ ಯುವಕನಿಗೆ ಚಾಕುವಿನಿಂದ ಇರಿತ!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments