ಬೆಳ್ತಂಗಡಿ : ಗುರುವಾಯನಕೆರೆಯ ಸರಕಾರಿ ಪ್ರೌಢಶಾಲೆ ಮೈದಾನದ ಸಮೀಪ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು, ಅವರಿಂದ ಗಾಂಜಾ ಹಾಗೂ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ
ಬಂಧಿತರನ್ನು ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ಟ್ವಾಲ್ಹಾ ಅಲಿಯಾಸ್ ಅಜ್ಜರ್ ಅಲಿಯಾಸ್ ಅನ್ಸಾರ್ (21) ಹಾಗೂ ಪಿಲಿಚಂಡಿಕಲ್ಲು ನಿವಾಸಿ ಇಬ್ರಾಹಿಂ (29) ಎಂದು ಗುರುತಿಸಲಾಗಿದೆ. ಶಾಲೆ ಮೈದಾನದ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಇಬ್ಬರು ದ್ವಿಚಕ್ರ ವಾಹನಗಳೊಂದಿಗೆ ನಾಲ್ವರು ಅನುಮಾನಾಸ್ಪದವಾಗಿ ನಿಂತಿದ್ದನ್ನು ಕಂಡ ಪೊಲೀಸರು ತೆರಳಿದಾಗ ಗ್ಯಾಂಗ್ ಓಡಲು ಯತ್ನಿಸಿದೆ. ಪೊಲೀಸರು ಬೆನ್ನಟ್ಟಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಅನ್ಸಾರ್ನಿಂದ 5,000 ರೂ. ಮೌಲ್ಯದ ಎಂಡಿಎಂಎ ಹಾಗೂ ಇಬ್ರಾಹಿಂನಿಂದ 29 ಗ್ರಾಂ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಘಟನಾ ಸ್ಥಳದಿಂದ ಪರಾರಿಯಾಗಿರುವ ಹಂಝತ್ ಕರಾರ್ ಮತ್ತು ನೌಷಾದ್ ಅವರ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಇದನ್ನು ಓದಿ : Bengaluru : ವಿದ್ಯಾರಣ್ಯಪುರದಿಂದ ನಾಪತ್ತೆಯಾಗಿದ್ದ ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ!