Homeತಾಜಾ ಸುದ್ದಿBeltangady : ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ - ಪ್ರಮುಖ ಆರೋಪಿ ರವಿ ಪೂಜಾರಿ...

Beltangady : ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ – ಪ್ರಮುಖ ಆರೋಪಿ ರವಿ ಪೂಜಾರಿ ಬಂಧನ, ಇಬ್ಬರು ವಶಕ್ಕೆ!

ಬೆಳ್ತಂಗಡಿ :  ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಸ್ವಾತಿ ಕಟ್ಟಡದಲ್ಲಿ ಡಾ. ಪ್ರದೀಪ್‌ ಅವರು ನಡೆಸುತ್ತಿದ್ದ ಆರೋಗ್ಯ ಕ್ಲಿನಿಕ್‌ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗಾಗಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ನಾವೂರು ನಿವಾಸಿ ರವಿ ಪೂಜಾರಿ ಬಂಧಿತ ಪ್ರಮುಖ ಆರೋಪಿಯಾಗಿದ್ದು, ಅಕ್ಟೋಬರ್ 14ರ ಸಂಜೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವೂರು ನಿವಾಸಿ ಸುರೇಶ್ ಇಂಚರ ಹಾಗೂ ಪುತ್ತೂರಿನ ಕೌಡಿಚಾರು ಬಳಿಯಿದ್ದ ದಿನೇಶ್ ಪ್ರಭು ನಾವೂರು ಎಂಬುವವರನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

ಅಕ್ಟೋಬರ್ 7ರ ತಡರಾತ್ರಿ ನಾವೂರು ಟೌನ್‌ನ ಸ್ವಾತಿ ಕಟ್ಟಡದಲ್ಲಿ ಡಾ. ಪ್ರದೀಪ್‌ ನಡೆಸುತ್ತಿದ್ದ ಆರೋಗ್ಯ ಕ್ಲಿನಿಕ್‌ಗೆ ಡೀಸೆಲ್ ಸುಟ್ಟು ಬೆಂಕಿ ಹಚ್ಚಲಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆಯನ್ನು ತೀವ್ರಗೊಳಿಸಿದ ಬೆಳ್ತಂಗಡಿ ಪೊಲೀಸರು, ಘಟನೆ ನಡೆದ ವಾರದೊಳಗೆ ಆರೋಪಿಯನ್ನು ಗುರುತಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರವಿ ಪೂಜಾರಿ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಸುರೇಶ್ ಇಂಚರ ಹಾಗೂ ದಿನೇಶ್ ಪ್ರಭು ಅವರು ಸಂಚು ರೂಪಿಸಿ ರವಿ ಮೂಲಕ ಕ್ಲಿನಿಕ್‌ಗೆ ಬೆಂಕಿ ಹಚ್ಚಿಸಿದ್ದಾರೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಬಂಧಿತ ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಡಪಡಿಸುವ ನಿರೀಕ್ಷೆಯಿದೆ.

ಅಪರ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮಾರೆಡ್ಡಿ, ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ, ಎಸ್‌ಒಸಿಒ (SOCO) ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಡಿವೈಎಸ್ಪಿ ರೋಹಿಣಿ ಸಿ.ಕೆ. ಮಾರ್ಗದರ್ಶನದಲ್ಲಿ ಮತ್ತು ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಉಪನಿರೀಕ್ಷಕರಾದ ಆನಂದ್ ಮತ್ತು ಸಿಕಂದರ್ ಪಾಷಾ ಅವರು ಈ ತಂಡದಲ್ಲಿದ್ದರು.

ಇದನ್ನು ಓದಿ : Meerut Murder Case : ಗಂಡನನ್ನು ಕೊಂದು ಡ್ರಮ್‌ನಲ್ಲಿ ಬಾಂಧಿದ್ದ ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments