Homeತಾಜಾ ಸುದ್ದಿBelthangady : 16 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಮಗುವಿಗೆ ಜನ್ಮ ನೀಡಿದ ಬಾಲಕಿ; 21ರ...

Belthangady : 16 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಮಗುವಿಗೆ ಜನ್ಮ ನೀಡಿದ ಬಾಲಕಿ; 21ರ ಶ್ರೀಕಾಂತ್ ಅರೆಸ್ಟ್!

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದ ಆಂಧ್ರಪ್ರದೇಶ ಮೂಲದ, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಶ್ರೀಕಾಂತ್ (21) ಎಂಬಾತ, ಕಳೆದ ವರ್ಷ ಸೆಪ್ಟೆಂಬರ್ ಮತ್ತು ನವೆಂಬರ್ ನಡುವೆ ಆಕೆಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಅಲ್ಲದೆ ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಜೀವ ಬೆದರಿಕೆ ಹಾಕಿದ್ದನು. ಇದರಿಂದ ಭಯಭೀತಳಾದ ಬಾಲಕಿ ಯಾರಿಗೂ ವಿಷಯ ತಿಳಿಸದೆ ಮೌನವಾಗಿದ್ದಳು.

ಬಳಿಕ ಬಾಲಕಿ ಗರ್ಭಿಣಿಯಾಗಿದ್ದು, ಆಗಸ್ಟ್ 22ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸಂತ್ರಸ್ತೆಯ ಕುಟುಂಬಸ್ಥರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೇಸ್ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಆರೋಪಿ ಶ್ರೀಕಾಂತ್, ದೊಡ್ಡಬಳ್ಳಾಪುರದಿಂದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಹಿಂದೂಪುರದಲ್ಲಿರುವ ತನ್ನ ಸ್ವಗ್ರಾಮಕ್ಕೆ ಎಸ್ಕೇಪ್ ಆಗಲು ಯತ್ನಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಇದನ್ನು ಓದಿ : Udupi : 8 ವರ್ಷದ ಹಿಂದೆ ಸತ್ತ ಮಗನ ಹೆಸರಲ್ಲಿ ವಜ್ರದ ದಂಧೆ ಕತೆ ಕಟ್ಟಿ 5 ಲಕ್ಷಕ್ಕೆ ಬ್ಲ್ಯಾಕ್‌ಮೇಲ್: ದುಬೈಗೆ ಕಾಲ್ ಮಾಡಿ ಅತ್ತಿಗೆಗೆ ಬೆದರಿಕೆ ಹಾಕಿದ ಗ್ಯಾಂಗ್ ಅರೆಸ್ಟ್!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments