Monday, May 11, 2026
Homeತಾಜಾ ಸುದ್ದಿBengaluru : ಲೈಂಗಿಕ ದೌರ್ಜನ್ಯ ಎಸಗಿ ಸಿಕ್ಕಿಬಿದ್ದ ಹನಿಯೂರು ಚಂದ್ರೇಗೌಡ

Bengaluru : ಲೈಂಗಿಕ ದೌರ್ಜನ್ಯ ಎಸಗಿ ಸಿಕ್ಕಿಬಿದ್ದ ಹನಿಯೂರು ಚಂದ್ರೇಗೌಡ

ಬೆಂಗಳೂರು : ಬಂಧಿತ ಆರೋಪಿಯನ್ನು ಹನಿಯೂರು ಚಂದ್ರೇಗೌಡ ಎಂದು ಗುರುತಿಸಲಾಗಿದೆ. ಈತ ತನ್ನನ್ನು ತಾನು ಬೆಂಗಳೂರು ದಕ್ಷಿಣ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಎಂದು ಎಲ್ಲೆಡೆ ಬಿಂಬಿಸಿಕೊಳ್ಳುತ್ತಿದ್ದನು. ಲೈಂಗಿಕ ದೌರ್ಜನ್ಯ ಎಸಗುವ ವೇಳೆ ಸಂತ್ರಸ್ತೆಯರ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ರಹಸ್ಯವಾಗಿ ತೆಗೆದುಕೊಂಡು, ನಂತರ ಅದೇ ವಿಡಿಯೋಗಳನ್ನು ಇಟ್ಟುಕೊಂಡು ಅವರನ್ನು ಬೆದರಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಸಂತ್ರಸ್ತೆಯೊಬ್ಬರು ನೀಡಿದ ದೂರಿನ ಮೇರೆಗೆ ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

 

ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಮೊಬೈಲ್ ಅನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಬೆಚ್ಚಿಬೀಳಿಸುವ ವಿಷಯಗಳು ಹೊರಬಿದ್ದಿವೆ. ಮೊಬೈಲ್‌ನಲ್ಲಿ ಬರೋಬ್ಬರಿ 20ಕ್ಕೂ ಹೆಚ್ಚು ಮಹಿಳೆಯರ ಖಾಸಗಿ ಫೋಟೋಗಳು ಮತ್ತು ವಿಡಿಯೋಗಳು ಸಿಕ್ಕಿವೆ. ಆರೋಪಿಯು ಕೆಲ ಧಾರಾವಾಹಿಗಳಲ್ಲೂ ನಟಿಸಿದ್ದನು ಎಂಬುದು ತನಿಖೆಯಿಂದ ತಿಳಿದುಬಂದಿದೆ. ನಕಲಿ ಗುರುತಿನ ಚೀಟಿಗಳನ್ನು ಸೃಷ್ಟಿಸಿಕೊಂಡು, ಸಮಾಜ ಸೇವಕ ಎಂಬ ನಾಟಕವಾಡುತ್ತಾ ಹಲವು ಮಹಿಳೆಯರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದದ್ದು ಪೊಲೀಸರ ತನಿಖೆಯಲ್ಲಿ ದೃಢಪಟ್ಟಿದೆ.

ಪೊಲೀಸ್ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಆರೋಪಿಯು ಹಲವು ಮಹಿಳೆಯರಿಗೆ ಬೆದರಿಕೆ ಹಾಕಿದ್ದು, ಇದೀಗ ಆತನ ಮೊಬೈಲ್ ಡೇಟಾವನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇಂತಹ ಪ್ರಕರಣಗಳಲ್ಲಿ ಸಂತ್ರಸ್ತೆಯರು ಮೌನವಾಗಿರದೆ ಧೈರ್ಯದಿಂದ ದೂರು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಆತನ ಕೃತ್ಯಗಳ ಹಿಂದೆ ಇನ್ನು ಯಾರಾದರೂ ಶಾಮೀಲಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!