Tuesday, May 12, 2026
Homeತಾಜಾ ಸುದ್ದಿBhatkal : ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವ ಕಾರ್ಮಿಕ ಮೃತ್ಯು!

Bhatkal : ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವ ಕಾರ್ಮಿಕ ಮೃತ್ಯು!

ಭಟ್ಕಳ : ಭಟ್ಕಳ ತಾಲೂಕಿನ ಗೋರ್ಟೆ ಸಮೀಪ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಪರಿಣಾಮ ಯುವ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತನನ್ನು ಬಿಹಾರ ಮೂಲದ ಅಭಿನಾಶ್ ಕುಮಾರ್ (28) ಎಂದು ಗುರುತಿಸಲಾಗಿದೆ. ಇವರು ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಅಭಿನಾಶ್ ಕುಮಾರ್ ಅವರು ನಿಜಾಮುದ್ದೀನ್‌ನಿಂದ ಎರ್ನಾಕುಲಂಗೆ ಸಂಚರಿಸುತ್ತಿದ್ದ ಮಂಗಳೂರು–ಲಕ್ಷದ್ವೀಪ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಗೋರ್ಟೆ ಸಮೀಪ ಹಾದುಹೋಗುತ್ತಿದ್ದ ವೇಳೆ ಅವರು ಏಕಾಏಕಿ ಸಮತೋಲನ ತಪ್ಪಿ ಕೆಳಗೆ ಬಿದ್ದಿದ್ದಾರೆ. ಇದರಿಂದಾಗಿ ತೀವ್ರ ಗಾಯಗಳಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಭಟ್ಕಳ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!