Wednesday, April 8, 2026
Homeತಾಜಾ ಸುದ್ದಿDavid Warner Arrested : ಮೂರೇ ಪೆಗ್ಗಿಗೆ ಪೊಲೀಸರ ಅತಿಥಿಯಾದ ಡೇವಿಡ್ ವಾರ್ನರ್!

David Warner Arrested : ಮೂರೇ ಪೆಗ್ಗಿಗೆ ಪೊಲೀಸರ ಅತಿಥಿಯಾದ ಡೇವಿಡ್ ವಾರ್ನರ್!

ಆಸ್ಟ್ರೇಲಿಯಾ : ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಡೇವಿಡ್ ವಾರ್ನರ್ ಅವರು ಸಿಡ್ನಿಯಲ್ಲಿ ಪಾನಮತ್ತರಾಗಿ ವಾಹನ ಚಾಲನೆ ಮಾಡುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಸ್ನೇಹಿತನ ಮನೆಯಲ್ಲಿ ಪಾರ್ಟಿ ಮುಗಿಸಿ, ಮೂರು ಗ್ಲಾಸ್ ವೈನ್ ಸೇವಿಸಿ ಮನೆಗೆ ಮರಳುವಾಗ ಈ ಘಟನೆ ನಡೆದಿದೆ. ಮರೌಬ್ರಾದ ಮಲಬಾರ್ ರಸ್ತೆಯಲ್ಲಿ ಅನಿರೀಕ್ಷಿತವಾಗಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಪೊಲೀಸರನ್ನು ಕಂಡು ವಾರ್ನರ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ತಪಾಸಣಾ ಕೇಂದ್ರಕ್ಕೆ ಬರುವ ಮುನ್ನವೇ ರಸ್ತೆ ಬದಿಯಲ್ಲಿ ಗಾಡಿ ನಿಲ್ಲಿಸಿ ಹೋದ ವಾರ್ನರ್ ಅವರನ್ನು ತಡೆದ ಪೊಲೀಸರು ಉಸಿರಾಟದ ಪರೀಕ್ಷೆ ನಡೆಸಿದಾಗ ಮದ್ಯ ಸೇವಿಸಿರುವುದು ದೃಢಪಟ್ಟಿದೆ.

ಆಸ್ಟ್ರೇಲಿಯಾದ ಕಾನೂನಿನ ಪ್ರಕಾರ ಮದ್ಯಪಾನದ ನಿಗದಿತ ಮಿತಿಗಿಂತಲೂ ಎರಡು ಪಟ್ಟು ಹೆಚ್ಚು ಮದ್ಯ ವಾರ್ನರ್ ಅವರ ರಕ್ತದಲ್ಲಿ ಪತ್ತೆಯಾಗಿದೆ. ಇದರಿಂದಾಗಿ ತಕ್ಷಣವೇ ಅವರನ್ನು ಬಂಧಿಸಿದ ಪೊಲೀಸರು ಮರೌಬ್ರಾ ಪೊಲೀಸ್ ಠಾಣೆಗೆ ಕರೆದೊಯ್ದು ಪ್ರಕರಣ ದಾಖಲಿಸಿದ್ದಾರೆ. ಸದ್ಯ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರೂ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡ್ನಿಯ ಡೌನಿಂಗ್ ಸೆಂಟರ್ ಸ್ಥಳೀಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಬೇಕಿದೆ.

ಈ ಬಂಧನ ಪ್ರಕರಣವು ವಾರ್ನರ್ ಅವರ ವೃತ್ತಿಜೀವನದ ಮೇಲೆಯೂ ಪರಿಣಾಮ ಬೀರಿದೆ. ಪ್ರಸ್ತುತ ಪಾಕಿಸ್ತಾನ್ ಸೂಪರ್ ಲೀಗ್ (PSL) ನಲ್ಲಿ ಕರಾಚಿ ಕಿಂಗ್ಸ್ ತಂಡದ ನಾಯಕನಾಗಿರುವ ಅವರು, ಪಂದ್ಯಗಳ ನಡುವಿನ ಬಿಡುವಿನ ವೇಳೆಯಲ್ಲಿ ತಾಯ್ನಾಡಿಗೆ ಮರಳಿದ್ದರು. ಆದರೆ ಈಗ ಈ ಕಾನೂನು ಸಂಕಷ್ಟಕ್ಕೆ ಸಿಲುಕಿರುವ ಕಾರಣ, ಅವರು ಮತ್ತೆ ಪಾಕಿಸ್ತಾನಕ್ಕೆ ಮರಳಿ ಟೂರ್ನಿಯಲ್ಲಿ ಭಾಗವಹಿಸುವ ಸಾಧ್ಯತೆಗಳು ಕ್ಷೀಣಿಸಿವೆ. ಮೈದಾನದಲ್ಲಿ ಅಬ್ಬರಿಸುತ್ತಿದ್ದ ಆಟಗಾರ ಈಗ ಮದ್ಯದ ನಶೆಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿರುವುದು ಅವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!