Homeತಾಜಾ ಸುದ್ದಿDelhi : ಚಲಿಸುತ್ತಿದ್ದ ಬಸ್ಸಿನೊಳಗೆ ಮಹಿಳೆಯ ಮೇಲೆ ಗ್ಯಾಂಗ್ ರೇಪ್ - ಚಾಲಕ, ಕಂಡಕ್ಟರ್ ಬಂಧನ!

Delhi : ಚಲಿಸುತ್ತಿದ್ದ ಬಸ್ಸಿನೊಳಗೆ ಮಹಿಳೆಯ ಮೇಲೆ ಗ್ಯಾಂಗ್ ರೇಪ್ – ಚಾಲಕ, ಕಂಡಕ್ಟರ್ ಬಂಧನ!

ನವದೆಹಲಿ :ಪಶ್ಚಿಮ ದೆಹಲಿಯ ನಂಗ್ಲೋಯಿ ಪ್ರದೇಶದಲ್ಲಿ ಖಾಸಗಿ ಬಸ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೆಹಲಿ ಪೊಲೀಸರು ಗುರುವಾರ ಇಬ್ಬರನ್ನು ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. 


ನಡೆದಿದ್ದೇನು?


ಸೋಮವಾರ ರಾತ್ರಿ 11 ಗಂಟೆಯ ಸುಮಾರಿಗೆ ಮಹಿಳೆ ಕೆಲಸ ಮುಗಿಸಿ ಸರಸ್ವತಿ ವಿಹಾರ್ ಬಿ-ಬ್ಲಾಕ್ ಬಸ್ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಅಲ್ಲಿ ನಿಂತಿದ್ದ ಸ್ಲೀಪರ್ ಬಸ್ಸಿನ ಬಾಗಿಲ ಬಳಿ ಇದ್ದ ಕಂಡಕ್ಟರ್ ಬಳಿ ಮಹಿಳೆ ಸಮಯ ಕೇಳಲು ಧಾವಿಸಿದ್ದಾರೆ. ಈ ಸಂದರ್ಭದಲ್ಲಿ ಆಕೆಯನ್ನು ಬಲವಂತವಾಗಿ ಬಸ್ಸಿನೊಳಗೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಘೋರ ಕೃತ್ಯವು ದೆಹಲಿಯ ರಾಣಿಬಾಗ್ ಪ್ರದೇಶದಲ್ಲಿ ನಡೆದಿದ್ದು, ಸುಮಾರು 7 ಕಿಲೋಮೀಟರ್‌ಗಳವರೆಗೆ ಬಸ್ ಚಲಿಸುತ್ತಲೇ ಇತ್ತು. ಅತ್ಯಾಚಾರದ ನಂತರ, ತಡರಾತ್ರಿ 2 ಗಂಟೆಯ ಸುಮಾರಿಗೆ ಆರೋಪಿಗಳು ಮಹಿಳೆಯನ್ನು ಚಲಿಸುತ್ತಿದ್ದ ಬಸ್ಸಿನಿಂದ ಹೊರಕ್ಕೆ ದಬ್ಬಿದ್ದಾರೆ. ಇದರಿಂದಾಗಿ ಮಹಿಳೆಗೆ ಗಾಯಗಳಾಗಿದ್ದು, ಪ್ರಸ್ತುತ ಪೊಲೀಸರು ಘಟನೆ ಕುರಿತು ಗಂಭೀರ ತನಿಖೆ ಮುಂದುವರಿಸಿದ್ದಾರೆ.

ಇದನ್ನು ಓದಿ : Uttar Pradesh storm deaths : ಭೀಕರ ಬಿರುಗಾಳಿ-ಮಳೆಗೆ 56 ಮಂದಿ ಬಲಿ! ಸಂತ್ರಸ್ತರಿಗೆ 24 ಗಂಟೆಯೊಳಗೆ ಪರಿಹಾರ ನೀಡಲು ಸಿಎಂ ಯೋಗಿ ಆದೇಶ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments