Monday, May 11, 2026
Homeತಾಜಾ ಸುದ್ದಿElection Commission rally ban : ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ರ‍್ಯಾಲಿಗೆ ಬ್ರೇಕ್ ಹಾಕಿದ ಚುನಾವಣಾ...

Election Commission rally ban : ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ರ‍್ಯಾಲಿಗೆ ಬ್ರೇಕ್ ಹಾಕಿದ ಚುನಾವಣಾ ಆಯೋಗ!

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು, ಫಲಿತಾಂಶ ಹೊರಬರುತ್ತಿರುವ ಬೆನ್ನಲ್ಲೇ ಚುನಾವಣಾ ಆಯೋಗವು ಕಠಿಣ ಕ್ರಮಕ್ಕೆ ಮುಂದಾಗಿದೆ. ಸೋಮವಾರ ರಾಜ್ಯದ ಯಾವುದೇ ಭಾಗದಲ್ಲಿ ವಿಜಯೋತ್ಸವ ರ‍್ಯಾಲಿಗಳನ್ನು ಆಚರಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಮುಖ್ಯ ಚುನಾವಣಾಧಿಕಾರಿಯ ಕಚೇರಿಯ ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ಫಲಿತಾಂಶ ಘೋಷಣೆಯಾದ ನಂತರ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ವಿಜಯೋತ್ಸವ ಆಚರಿಸಲು ಅಥವಾ ರ‍್ಯಾಲಿಗಳನ್ನು ನಡೆಸಲು ಯಾವುದೇ ಅವಕಾಶವಿರುವುದಿಲ್ಲ ಎಂದು ವಿಶೇಷ ಚುನಾವಣಾ ವೀಕ್ಷಕ ಸುಬ್ರತಾ ಗುಪ್ತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!