HomeLOCALJokatte : ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸಂಪೂರ್ಣ ಹಾನಿ, ಯುವಕನಿಗೆ ಸುಟ್ಟ ಗಾಯ!

Jokatte : ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸಂಪೂರ್ಣ ಹಾನಿ, ಯುವಕನಿಗೆ ಸುಟ್ಟ ಗಾಯ!

Jokatte : ಸುರತ್ಕಲ್‌ನ ಜೋಕಟ್ಟೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯೊಂದು ಸಂಪೂರ್ಣ ಹಾನಿಗೀಡಾಗಿದ್ದು, ಓರ್ವ ಯುವಕನಿಗೆ ಸುಟ್ಟ ಗಾಯಗಳಾಗಿರುವ ಘಟನೆ ವರದಿಯಾಗಿದೆ.

ಡಿ.ಇಜ್ಜಾಕ್ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಅನಾಹುತ ಸಂಭವಿಸಿದ್ದು, ಇವರ ಕಿರಿಯ ಪುತ್ರ ಜಾಬಿರ್ ಎಂಬುವವರಿಗೆ ಬೆಂಕಿ ತಗುಲಿ ಗಾಯಗಳಾಗಿವೆ. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ತಡರಾತ್ರಿ ಮನೆಯಲ್ಲಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಡೈನಿಂಗ್ ಹಾಲ್, ಅಡುಗೆ ಮನೆ, ಒಂದು ಮಲಗುವ ಕೋಣೆ ಹಾಗೂ ಚಾವಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಪ್ರಾಣಾಪಾಯದಿಂದ ಪಾರಾದ ಕುಟುಂಬ: ಅಪಘಾತ ಸಂಭವಿಸಿದ ರಾತ್ರಿ ಮನೆಯಲ್ಲಿ ಜಾಬಿರ್, ಅವರ ತಾಯಿ, ಅತ್ತಿಗೆ ಹಾಗೂ ಅಣ್ಣನ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು 7 ಮಂದಿ ನಿದ್ರೆಯინಲಿದ್ದರು. ಈ ಪೈಕಿ ಜಾಬಿರ್ ಮನೆಯ ಮುಂಭಾಗದಲ್ಲಿ ಮಲಗಿದ್ದ ಕಾರಣ ಸುಟ್ಟ ಗಾಯಗಳಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳಿದ ಸದಸ್ಯರು ಮನೆಯ ಬೇರೆ ಕೋಣೆಗಳಲ್ಲಿ ಮಲಗಿದ್ದರಿಂದ ದೊಡ್ಡ ದುರಂತದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿ : Jokatte : ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸಂಪೂರ್ಣ ಹಾನಿ, ಯುವಕನಿಗೆ ಸುಟ್ಟ ಗಾಯ!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments