Home ತಾಜಾ ಸುದ್ದಿ Kaup : ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಬ್ಬ ಸಾವು, ಇಬ್ಬರು ಗಾಯ

    Kaup : ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಬ್ಬ ಸಾವು, ಇಬ್ಬರು ಗಾಯ

    0
    77
    Kaup: Fatal accident on Mangaluru–Udupi national highway; one dead, two injured

    ಕಾಪು (ಏ.17): ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪಂಗಾಳ ಕಟ್ಟಿಕೆರೆ ಎಂಬಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.


    ಮಂಗಳೂರಿನಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಕಾರಿಗೆ ಲಾರಿಯೊಂದು ಭೀಕರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಉಳಿದ ಇಬ್ಬರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

    ಅಪಘಾತ ಸಂಭವಿಸಿದ ತಕ್ಷಣ ಕಾಪು ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಿದರು. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ.

    LEAVE A REPLY

    Please enter your comment!
    Please enter your name here

    error: Content is protected !!