ಕೋಲಾರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಾಹಿತಿ ಪ್ರಕಾರ, ಗಾರೆ ಕೆಲಸಕ್ಕೆಂದು ಪಚ್ಚರಮಾಕಲಹಳ್ಳಿಗೆ ತೆರಳಿದ್ದ ಯುವಕರು ಮಧ್ಯಾಹ್ನದ ತೀವ್ರ ಬಿಸಿಲಿನ ತಾಪಮಾನ ತಾಳಲಾರದೆ ತಂಪು ಪಡೆಯಲು ಸಮೀಪದ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಇಬ್ಬರೂ ಯುವಕರು ದುರಂತವಾಗಿ ಸಾವನ್ನಪ್ಪಿದ್ದಾರೆ.
ಮೃತಪಟ್ಟ ಯುವಕರನ್ನು ರೋಣೂರು ಹೋಬಳಿ ವ್ಯಾಪ್ತಿಯ ಚಾಂಪಲ್ಲಿ ಗ್ರಾಮದ ನಿವಾಸಿಗಳಾದ ನರೇಂದ್ರ (25) ಹಾಗೂ ಚಂದನ್ (23) ಎಂದು ಗುರುತಿಸಲಾಗಿದೆ. ಮೃತಪಟ್ಟ ಇಬ್ಬರೂ ಯುವಕರು ಸ್ವಂತ ಅಣ್ಣ-ತಮ್ಮಂದಿರಾಗಿದ್ದು, ಇವರ ಸಾವಿನಿಂದ ಕುಟುಂಬವು ತೀವ್ರ ಶೋಕದಲ್ಲಿ ಮುಳುಗಿದೆ. ಈ ಘಟನೆಯು ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನು ಓದಿ : Karkala : ಬೀಡಿ ಕಾರ್ಮಿಕರಿಗೆ ‘ಸ್ಮಾರ್ಟ್ ಕಾರ್ಡ್’ ವಿತರಣೆ; ಸಾಮಾಜಿಕ ಭದ್ರತಾ ಮಂಡಳಿಯಿಂದ ಹೊಸ ಕೊಡುಗೆ!

