HomeLOCALKundapura : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು!

Kundapura : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು!

ಕುಂದಾಪುರ : ಸೋಮವಾರ ರಾತ್ರಿ ಸುಮಾರು 10 ಗಂಟೆಯ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯಲ್ಲಿ ಈ ಘೋರ ದುರಂತ ನಡೆದಿದೆ. ಮೃತರನ್ನು ಕೋಟೇಶ್ವರ ಗಾಂಧಿ ನಗರದ ನಿವಾಸಿ, ದಿವಂಗತ ಉಂಙಾಕ ಅವರ ಪತ್ನಿ ಅಲಿಮಾಬಿ (62) ಎಂದು ಗುರುತಿಸಲಾಗಿದೆ.

ಅಲಿಮಾಬಿ ಅವರು ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವೆನ್ಶನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದ್ದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮ ಮುಗಿಸಿ ಇತರ ಮೂವರು ಮಹಿಳೆಯರೊಂದಿಗೆ ಮನೆಗೆ ಮರಳಲು ರಸ್ತೆ ದಾಟುತ್ತಿದ್ದಾಗ ಈ ಅನಾಹುತ ಸಂಭವಿಸಿದೆ. ಮಂಗಳೂರಿನಿಂದ ಬಾದಾಮಿ-ಐಹೊಳೆ ಕಡೆಗೆ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಅಲಿಮಾಬಿಯವರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಮದುವೆ ಸಂಭ್ರಮದ ನಡುವೆಯೇ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ.

ಇದನ್ನು ಓದಿ : Delhi Assembly Security Breach : ದೆಹಲಿ ವಿಧಾನಸಭೆ ಉಲ್ಲಂಘನೆ ಹಿನ್ನೆಲೆ: ಆರೋಪಿಯ ವಿರುದ್ಧ ತನಿಖೆ, ಕೊಲೆ ಯತ್ನ ಪ್ರಕರಣ ದಾಖಲು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments