ಮಲ್ಪೆ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ರಸ್ತೆ ಬದಿಯಲ್ಲಿ ನವಜಾತ ಶಿಶುವೊಂದನ್ನು ಎಸೆದು ಹೋಗಿರುವ ಕರುಣಾಜನಕ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.
ಮನೆಯೊಂದಕ್ಕೆ ಹೋಗುವ ಕಾಲು ದಾರಿಯಲ್ಲಿ ಕೆಲವೇ ಸಮಯದ ಹಿಂದೆ ಹುಟ್ಟಿದ ಹೆಣ್ಣು ಮಗುವೊಂದು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಮಗುವನ್ನು ತಪಾಸಣೆಗೊಳಪಡಿಸಿದಾಗ ಮಗುವಿನಲ್ಲಿ ಹೃದಯ ಬಡಿತ ಕಂಡುಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಘಟನೆಯ ಸುಳಿವು ಸಿಗುತ್ತಿದ್ದಂತೆ ಮಲ್ಪೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ನವಜಾತ ಶಿಶುವನ್ನು ಎಸೆದು ಪರಾರಿಯಾದ ಕಲ್ಲುಮನಸ್ಸಿನ ವ್ಯಕ್ತಿಗಳ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.
ಇದನ್ನು ಓದಿ : Udupi : 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಹೊನ್ನಾವರದ ಹಲ್ದಿಪುರದಲ್ಲಿ ಬಂಧನ!