Thursday, April 2, 2026
HomeLOCALMangalore University Doctorate : ಹರೇಕಳ ಹಾಜಬ್ಬ ಸೇರಿದಂತೆ ಮೂವರು ಸಾಧಕರಿಗೆ ಮಂಗಳೂರು ವಿವಿ ಗೌರವ...

Mangalore University Doctorate : ಹರೇಕಳ ಹಾಜಬ್ಬ ಸೇರಿದಂತೆ ಮೂವರು ಸಾಧಕರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್!

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಲಾಗಿದೆ. ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಯಕ್ಷಗಾನದ ಹಿರಿಯ ಕಲಾವಿದ ದಿವಂಗತ ಸೂರಿಕುಮೇರು ಗೋವಿಂದ ಭಟ್ ಮತ್ತು ದೈವ ನರ್ತಕ ರವೀಶ್ ಪಡುಮಲೆ ಅವರಿಗೆ ಈ ಗೌರವ ಸಂದಿದೆ.

ಮಾರ್ಚ್ 28 ರಂದು ಪೂರ್ವಾಹ್ನ 11 ಗಂಟೆಗೆ ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಈ ಪದವಿಗಳನ್ನು ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಮತ್ತು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!