ಮಂಗಳೂರು : 2019 ರಲ್ಲಿ ದಾಖಲಾಗಿದ್ದ ಮನೆಗೆಲಸದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 44 ವರ್ಷದ ಮಹಿಳೆಯನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಆಕಾಶ್ ಭವನದ ಆನಂದ ನಗರ ನಿವಾಸಿ ಲತಾ ಮರಿಯಾ (44) ಎಂದು ಗುರುತಿಸಲಾಗಿದೆ.
ಈಕೆಯ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 381 ರಡಿಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಈಕೆಯನ್ನು ಎಲ್ಪಿಸಿ ಆರೋಪಿ ಎಂದು ಘೋಷಿಸಿ, ಬಂಧನ ವಾರಂಟ್ ಹೊರಡಿಸಲಾಗಿತ್ತು.
ವಾರಂಟ್ ಆಧರಿಸಿ ಕಾರ್ಯಾಚರಣೆ ನಡೆಸಿದ ಕಾವೂರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ, ಜ್ಯೋತಿ ನಗರದಲ್ಲಿ ಆರೋಪಿ ಲತಾ ಮರಿಯಾಳನ್ನು ವಶಕ್ಕೆ ಪಡೆದಿದ್ದಾರೆ.