HomeLOCALMangaluru : ನ್ಯಾಯಾಲಯಕ್ಕೆ ಹಾಜರಾಗದೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್!

Mangaluru : ನ್ಯಾಯಾಲಯಕ್ಕೆ ಹಾಜರಾಗದೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್!

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಎಂಟು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಮುಕ್ಕಚೇರಿ ಸಮೀಪದ ಹಿಲರಿನಗರ ನಿವಾಸಿ ಮುವಾಝ್ (45) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಆದರೆ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡು ತಿರುಗುತ್ತಿದ್ದ ಹಿನ್ನೆಲೆಯಲ್ಲಿ ಕೋರ್ಟ್ ಆತನ ವಿರುದ್ಧ ಎಲ್‌ಪಿಸಿ (LPC – Long Pending Case) ವಾರಂಟ್ ಹೊರಡಿಸಿತ್ತು.

ತಲೆಮರೆಸಿಕೊಂಡ ಬಳಿಕ ಈತ ಕೇರಳದ ಇರಿಕ್ಕೂರು ಎಂಬಲ್ಲಿ ನೆಲೆಸಿದ್ದ ಎಂಬ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments