Mangaluru : ಮಂಗಳೂರಿನ ಮೆಲ್ಕಾರ್-ಮುಡಿಪು ಸಂಪರ್ಕ ರಸ್ತೆಯ ಬೋಳಿಯಾರ್ ಪೆಟ್ರೋಲ್ ಪಂಪ್ ಬಳಿ ಸೋಮವಾರ (ಅಕ್ಟೋಬರ್ 19) ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ನಲ್ಲಿದ್ದ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ.
ಮೃತರನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ನಿವಾಸಿಗಳಾದ ಮೊಹಮ್ಮದ್ ಅರ್ಫಾನ್ (22) ಮತ್ತು ಜುನೈದ್ (23) ಎಂದು ಗುರುತಿಸಲಾಗಿದೆ.
ಅತೀ ವೇಗವಾಗಿ ಬಂದ ಪಿಕ್-ಅಪ್ ವಾಹನವೊಂದು ಮೋಟಾರ್ ಸೈಕಲ್ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬೈಕ್ ಸಮೀಪದಲ್ಲಿದ್ದ ವಿದ್ಯುತ್ ಕಂಬಕ್ಕೆ ಹೋಗಿ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಈ ಭಯಾನಕ ಅಪಘಾತದ ದೃಶ್ಯಗಳು ಸ್ಥಳೀಯ ಪೆಟ್ರೋಲ್ ಪಂಪ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಯುವಕರ ಮೃತದೇಹಗಳನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.