ಮಂಗಳೂರು : ಮನೆಯಲ್ಲಿ ಲ್ಯಾಪ್ಟಾಪ್ ಮೂಲಕ ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಮಂಗಳವಾರ ಸಂಜೆ ನಗರದ ಬೋಳಾರ್ ಬಳಿಯ ಮಂಕಿಷ್ಟಾಂಡ್ ಎಂಬಲ್ಲಿ ಸಂಭವಿಸಿದೆ. ಮಂಕಿಷ್ಟಾಂಡ್ ನಿವಾಸಿ ರಾಜೇಂದ್ರ (59) ಮೃತ ವ್ಯಕ್ತಿ.
ಮಂಗಳವಾರ ಮನೆಯಲ್ಲಿ ಲ್ಯಾಪ್ಟಾಪ್ನಲ್ಲಿ ಸ್ಟಿಕ್ಕರ್ ಕಟಿಂಗ್ಗೆ ಸಂಬಂಧಿಸಿದ ಕೆಲಸ ಮಾಡುತ್ತಿದ್ದರು. ಮನೆಯವರು ಸಂಜೆ ನೋಡಿದಾಗ ಕುರ್ಚಿಯಲ್ಲಿ ಕುಳಿತಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಪತ್ತೆಯಾಗಿದೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಖಚಿತ ಮಾಹಿತಿ ದೊರೆಯಲಿದೆ.
ಇದನ್ನು ಓದಿ : Mangaluru : ನ್ಯಾಯಾಲಯಕ್ಕೆ ಹಾಜರಾಗದೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!