HomeLOCALMangaluru : ಎಂಆರ್‌ಪಿಎಲ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೋರ್ವ ನೌಕರ ರಾಜೇಶ್ ಸಾವು!

Mangaluru : ಎಂಆರ್‌ಪಿಎಲ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೋರ್ವ ನೌಕರ ರಾಜೇಶ್ ಸಾವು!

Mangaluru : ಮಂಗಳೂರಿನ ಎಂಆರ್‌ಪಿಎಲ್ (MRPL) ನಲ್ಲಿ ಸೆಪ್ಟೆಂಬರ್ 30 ರಂದು ಸಂಭವಿಸಿದ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಶ್ ಬ್ಯಾಪ್ಸಿಸ್ಟ್ (ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿ ರಾಜೇಶ್ ಡಿ’ಸಿಲ್ವಾ, ವಯಸ್ಸು 38) ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.

ಸ್ಫೋಟಗೊಂಡ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಜೇಶ್ ಅವರು ಶೇ. 35 ರಷ್ಟು ಸುಟ್ಟ ಗಾಯಗಳಿಗೆ ಒಳಗಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಸುಮಾರು 18 ದಿನಗಳಿಂದ ಆಸ್ಪತ್ರೆಯಲ್ಲಿ ಸಾವುನೋವಿನ ನಡುವೆ ಹೋರಾಡುತ್ತIದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಕೊನೆಯೆಸಿಳಿದ್ದಾರೆ. ಮೃತ ರಾಜೇಶ್ ಡಿ’ಸಿಲ್ವಾ ಅವರು ಸುರತ್ಕಲ್ ಇಡ್ಯಾ ಗ್ರಾಮದ ಕಾನ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಎಂ.ಆರ್.ಪಿ.ಎಲ್.ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಅವಿವಾಹಿತರಾಗಿದ್ದರು.

ಅಂದಹಾಗೆ, ಎಂಆರ್‌ಪಿಎಲ್‌ನಲ್ಲಿ ಸ್ಫೋಟ ಸಂಭವಿಸಿದ ದಿನವೇ ಗುತ್ತಿಗೆ ನೌಕರ ಮನೀಶ್ ಕರ್ಕೇರ ಅವರು ಸ್ಥಳದಲ್ಲೇ ಸುಟ್ಟು ಮೃತಪಟ್ಟಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments