ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿ ನಗರದ ಚರ್ಚ್‌ವೊಂದರ ಧರ್ಮಗುರುವನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಫಾ.ಸಿಪ್ರಿಯನ್ ಪಿಂಟೋ (63)ರನ್ನು ಪೊಲೀಸರು ಸಕಲೇಶಪುರದ ಸಂಬಂಧಿಕರೊಬ್ಬರ ಮನೆಯಿಂದ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಸಂತ್ರಸ್ತ ಬಾಲಕನ ನೀಡಿದ ದೂರಿನಂತೆ ಪಾಂಡೇಶ್ವರ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಫಾ.ಸಿಪ್ರಿಯನ್ ಪಿಂಟೋ ತನ್ನನ್ನು ಪುಸಲಾಯಿಸಿ ಚರ್ಚ್‌ನ ಕೊಠಡಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಬಾಲಕ ದೂರಿನಲ್ಲಿ ತಿಳಿಸಿದ್ದ, ಅಲ್ಲದೆ ಇತರ ಬಾಲಕರಿಗೂ ದೌರ್ಜನ್ಯ ಎಸಗಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ವಿಚಾರಣೆ ಹಾಗೂ ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನು ಓದಿ : Udupi : ರಕ್ತ ವಾಂತಿ ಮಾಡಿ ಬಸ್‌ಸ್ಟ್ಯಾಂಡ್‌ನಲ್ಲಿ ಬಿದ್ದಿದ್ದ ಯುವಕನ ರಕ್ಷಣೆ!