Homeತಾಜಾ ಸುದ್ದಿMoodbidri : 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದೈವಸ್ಥಾನ ಕಳವು ಪ್ರಕರಣದ ಆರೋಪಿ ತಮಿಳುನಾಡಿನಲ್ಲಿ ಬಂಧನ

Moodbidri : 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದೈವಸ್ಥಾನ ಕಳವು ಪ್ರಕರಣದ ಆರೋಪಿ ತಮಿಳುನಾಡಿನಲ್ಲಿ ಬಂಧನ

ಮೂಡುಬಿದಿರೆ : ದೈವಸ್ಥಾನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ತಮಿಳುನಾಡಿನ ತಿರುಪ್ಪೂರಿನಲ್ಲಿ ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಶಾಸ್ತ್ರಿ ಸ್ಟ್ರೀಟ್ ನಿವಾಸಿ ನಾಗರಾಜನ್ (38) ಎಂದು ಗುರುತಿಸಲಾಗಿದೆ. ಈತನ ವಿರುದ್ಧ 2018ರಲ್ಲಿ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದೈವಸ್ಥಾನದ ಕಳವಿಗೆ ಸಂಬಂಧಿಸಿ ಪ್ರಕರಣ (Crime No. 70/2018) ದಾಖಲಾಗಿತ್ತು. ಮೂಡುಬಿದಿರೆಯ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ತನಿಖೆ ನಡೆಯುತ್ತಿದ್ದರೂ ಆರೋಪಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ಕೋರ್ಟ್ ಅರೆಸ್ಟ್ ವಾರಂಟ್ ಹಾಗೂ ಪ್ರೊಕ್ಲಮೇಷನ್ ಹೊರಡಿಸಿತ್ತು.

ಖಚಿತ ಮಾಹಿತಿ ಮೇರೆಗೆ ತಮಿಳುನಾಡಿಗೆ ತೆರಳಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಸೋಮವಾರ ಮೂಡುಬಿದಿರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ.

ಇದನ್ನು ಓದಿ :  Kundapur : ಹಾಲಿನ ಅಂಗಡಿ ಮಾಡಿನ ತಗಡು ಒಡೆದು 1.10 ಲಕ್ಷ ರೂ. ನಗದು ಕಳವು! 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments