Home ತಾಜಾ ಸುದ್ದಿ Nashik TCS Case : ಜಾಲವನ್ನು ಮಟ್ಟಹಾಕುತ್ತೇವೆ, ಯಾರನ್ನೂ ರಕ್ಷಿಸುವುದಿಲ್ಲ ; ಮಹಾರಾಷ್ಟ್ರ ಸಿಎಂ ಫಡಣವೀಸ್!

    Nashik TCS Case : ಜಾಲವನ್ನು ಮಟ್ಟಹಾಕುತ್ತೇವೆ, ಯಾರನ್ನೂ ರಕ್ಷಿಸುವುದಿಲ್ಲ ; ಮಹಾರಾಷ್ಟ್ರ ಸಿಎಂ ಫಡಣವೀಸ್!

    0
    46

    ಕೊಲ್ಕತ್ತಾ (ಏ.18): ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಮತ್ತು ಬಲವಂತದ ಮತಾಂತರದ ಜಾಲವನ್ನು ನಮ್ಮ ಸರ್ಕಾರ ಶೀಘ್ರದಲ್ಲೇ ಭೇದಿಸಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


    ಕೊಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದು ಅತ್ಯಂತ ಗಂಭೀರವಾದ ವಿಷಯವಾಗಿದ್ದು, ಇದರ ಹಿಂದೆ ದೊಡ್ಡ ಜಾಲವೇ ಇದೆ. ನಾವು ಆ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕುತ್ತೇವೆ. ಪ್ರಕರಣದಲ್ಲಿ ಭಾಗಿಯಾದ ಎಂತಹ ಪ್ರಭಾವಿಗಳನ್ನೂ ನಾವು ರಕ್ಷಿಸುವುದಿಲ್ಲ. ತನಿಖೆಗಾಗಿ ಈಗಾಗಲೇ ಕೇಂದ್ರ ತನಿಖಾ ಸಂಸ್ಥೆಗಳ ನೆರವನ್ನು ಪಡೆಯಲಾಗುತ್ತಿದೆ” ಎಂದು ತಿಳಿಸಿದರು. ಅಲ್ಲದೆ, ಬಹುರಾಷ್ಟ್ರೀಯ ಕಂಪನಿಯೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಪೂರ್ಣ ಸಹಕಾರ ನೀಡಲು ಅಗತ್ಯ ಕ್ರಮ ಕೈಗೊಂಡಿದೆ ಎಂದು ಅವರು ಮಾಹಿತಿ ನೀಡಿದರು.

    ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆಯ ಪ್ರಕಾರ, ಈ ಪ್ರಕರಣದಲ್ಲಿ ಭಾಗಿಯಾಗಿರುವ ಏಳು ಆರೋಪಿಗಳು ಮಹಿಳಾ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಒಂದು ಸಂಘಟಿತ ಗ್ಯಾಂಗ್‌ನಂತೆ ಕಾರ್ಯನಿರ್ವಹಿಸುತ್ತಿದ್ದರು. ಈ ಸಂಬಂಧ ಪೊಲೀಸರು ಈಗಾಗಲೇ ಒಂಬತ್ತು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

    ಇದನ್ನು ಓದಿ : Rahul Gandhi : ದ್ವಿಪೌರತ್ವ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ನಿರ್ದೇಶನ

    LEAVE A REPLY

    Please enter your comment!
    Please enter your name here

    error: Content is protected !!