Home ತಾಜಾ ಸುದ್ದಿ Nitish Kumar Rajya Sabha oath : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭಾ ಸದಸ್ಯರಾಗಿ...

    Nitish Kumar Rajya Sabha oath : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ

    0
    70
    Nitish Kumar Rajya Sabha oath: Bihar Chief Minister Nitish Kumar took oath as Rajya Sabha member

    ನವ ದೇಹಲಿ : ಬಿಹಾರದ ರಾಜಕೀಯದಲ್ಲಿ ಇಂದು ಮಹತ್ವದ ಮೈಲಿಗಲ್ಲು ಸ್ಥಾಪನೆಯಾಗಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಸಭೆಯ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಅವರು ನಿತೀಶ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಬೆಳವಣಿಗೆಯೊಂದಿಗೆ ಬಿಹಾರದಲ್ಲಿ ಸುದೀರ್ಘ ಕಾಲದ ನಿತೀಶ್ ಕುಮಾರ್ ಅವರ ಆಡಳಿತ ಅಂತ್ಯಗೊಂಡಂತಾಗಿದೆ.

    ಪ್ರಮಾಣ ವಚನ ಸಮಾರಂಭದ ವಿವರ: ನಿತೀಶ್ ಕುಮಾರ್ ಅವರು ಹಿಂದಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ನಿರ್ಮಲಾ ಸೀತಾರಾಮನ್ ಮತ್ತು ಅರ್ಜುನ್ ರಾಮ್ ಮೇಘವಾಲ್ ಉಪಸ್ಥಿತರಿದ್ದರು. ಅಲ್ಲದೆ, ಜೆಡಿಯು ಕಾರ್ಯಾಧ್ಯಕ್ಷ ಸಂಜಯ್ ಕುಮಾರ್ ಝಾ, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮತ್ತು ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿ ಕೂಡ ಹಾಜರಿದ್ದರು.

    ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರು?: ರಾಜ್ಯಸಭೆಯ ಸದಸ್ಯರಾಗಿ ನಿತೀಶ್ ಕುಮಾರ್ ಜವಾಬ್ದಾರಿ ವಹಿಸಿಕೊಂಡಿರುವುದರಿಂದ, ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಿದೆ. ಎನ್‌ಡಿಎ (NDA) ಮೈತ್ರಿಕೂಟವು ಏಪ್ರಿಲ್ 14 ರಂದು ಸಭೆ ಸೇರಿ ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ನಿತೀಶ್ ಕುಮಾರ್ ಅವರು ರಾಷ್ಟ್ರ ರಾಜಕಾರಣದತ್ತ ಗಮನ ಹರಿಸಿರುವುದು ರಾಜ್ಯ ಮತ್ತು ಕೇಂದ್ರ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ.

    LEAVE A REPLY

    Please enter your comment!
    Please enter your name here

    error: Content is protected !!