Tuesday, May 12, 2026
Homeತಾಜಾ ಸುದ್ದಿPM Modi : ತೈಲ ಬೆಲೆ ಏರಿಕೆ ತಡೆಯಲು ಮೋದಿಯಿಂದ ಹೊಸ 'ಡಿಜಿಟಲ್' ಅಸ್ತ್ರ! ಶಾಲೆಗಳು...

PM Modi : ತೈಲ ಬೆಲೆ ಏರಿಕೆ ತಡೆಯಲು ಮೋದಿಯಿಂದ ಹೊಸ ‘ಡಿಜಿಟಲ್’ ಅಸ್ತ್ರ! ಶಾಲೆಗಳು ಇನ್ಮುಂದೆ ಆನ್‌ಲೈನ್?

ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಜಾಗತಿಕವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ಅತ್ಯಂತ ಮಹತ್ವದ ಮುನ್ನೆಚ್ಚರಿಕೆ ಮತ್ತು ಸಲಹೆಗಳನ್ನು ನೀಡಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಬೃಹತ್ ರಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಇಂಧನ ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಆದಷ್ಟು ಮಿತಗೊಳಿಸುವಂತೆ ಜನತೆಗೆ ಮನವಿ ಮಾಡಿದ್ದಾರೆ. ಇಂಧನ ಉಳಿತಾಯದ ಭಾಗವಾಗಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಆನ್‌ಲೈನ್ ತರಗತಿಗಳನ್ನು ನಡೆಸುವ ಕುರಿತು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಇದು ಸಾರಿಗೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಡಿಜಿಟಲ್ ತಂತ್ರಜ್ಞಾನದ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಿ, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ವರ್ಚುವಲ್ ಸಭೆಗಳಿಗೆ (Virtual Meetings) ಹೆಚ್ಚು ಆದ್ಯತೆ ನೀಡುವಂತೆ ಮತ್ತು ಸಾಧ್ಯವಾದಷ್ಟು ‘ವರ್ಕ್ ಫ್ರಂ ಹೋಮ್’ (Work From Home) ಪದ್ಧತಿಯನ್ನು ಉತ್ತೇಜಿಸುವಂತೆ ಕರೆ ನೀಡಿದ್ದಾರೆ. ಇಂಧನದ ಮೇಲಿನ ಅವಲಂಬನೆಯನ್ನು ತಗ್ಗಿಸಲು ನಾಗರಿಕರು ಖಾಸಗಿ ವಾಹನಗಳ ಬದಲಾಗಿ ಮೆಟ್ರೋ ರೈಲು ಸೇವೆಗಳು, ಎಲೆಕ್ಟ್ರಿಕ್ ವಾಹನಗಳು (EV) ಮತ್ತು ಸಾರ್ವಜನಿಕ ಸಾರಿಗೆಯನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಬೇಕು ಎಂದು ಮೋದಿ ಕಿವಿಮಾತು ಹೇಳಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯ ಆತಂಕ ಇರುವುದರಿಂದ, ಮುನ್ನೆಚ್ಚರಿಕಾ ಕ್ರಮವಾಗಿ ದೇಶದ ಒಳಗಿನ ಇಂಧನ ಬಳಕೆಯನ್ನು ನಿಯಂತ್ರಿಸುವುದು ಅನಿವಾರ್ಯವಾಗಿದೆ. ದೇಶದ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಪ್ರತಿಯೊಬ್ಬ ನಾಗರಿಕರು ಇಂಧನ ಉಳಿತಾಯದ ಈ ಅಭಿಯಾನದಲ್ಲಿ ಕೈಜೋಡಿಸಬೇಕು ಎಂದು ಪ್ರಧಾನಿ ಮೋದಿ ವಿನಂತಿಸಿದ್ದಾರೆ.

ಇದನ್ನು ಓದಿ : Job loss due to heat stress India : ಕೆಲಸದ ಸ್ಥಳದಲ್ಲಿ ಅತಿಯಾದ ಶಾಖವು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹಾನಿ ಮಾಡುತ್ತದೆ ಎಂದು ವೈದ್ಯರು ಎಚ್ಚರಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!