Friday, April 17, 2026
Homeತಾಜಾ ಸುದ್ದಿPM Modi : ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ

PM Modi : ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಂಗಳವಾರ) ಗೌರವ ನಮನ ಸಲ್ಲಿಸಿದರು. ದೇಶದ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಹರಿಕಾರರಾದ ಬಾಬಾಸಾಹೇಬರ ಜೀವನ ಮತ್ತು ಕಾರ್ಯಗಳು ಮುಂದಿನ ಪೀಳಿಗೆಗೆ ನ್ಯಾಯಸಮ್ಮತ ಮತ್ತು ಪ್ರಗತಿಪರ ಸಮಾಜವನ್ನು ನಿರ್ಮಿಸಲು ಸದಾ ಸ್ಫೂರ್ತಿ ನೀಡುತ್ತವೆ ಎಂದು ಪ್ರಧಾನಿ ಬಣ್ಣಿಸಿದರು.

ಪ್ರಧಾನಿ ಮೋದಿಯವರ ಸಂದೇಶ: ಈ ಕುರಿತು ‘X’ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿಯಂದು ಅವರಿಗೆ ಹೃತೂರ್ವಕ ನಮನಗಳು. ರಾಷ್ಟ್ರ ನಿರ್ಮಾಣಕ್ಕಾಗಿ ಅವರು ನಡೆಸಿದ ಪ್ರಯತ್ನಗಳು ನಮಗೆ ಆಳವಾದ ಪ್ರೇರಣೆ ನೀಡುತ್ತವೆ. ಅವರ ಆದರ್ಶಗಳು ದೇಶದ ಪ್ರತಿಯೊಂದು ಪೀಳಿಗೆಯಲ್ಲೂ ಸಮಾನತೆಯ ಕಿಚ್ಚು ಹಚ್ಚಲಿವೆ,” ಎಂದು ಹೇಳಿದ್ದಾರೆ.

ಸಂವಿಧಾನ ಶಿಲ್ಪಿಯ ಸ್ಮರಣೆ: 1891ರ ಏಪ್ರಿಲ್ 14ರಂದು ಮಧ್ಯಪ್ರದೇಶದ ಮಹೂನಲ್ಲಿ ಜನಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ಭಾರತದ ಸಂವಿಧಾನದ ಮುಖ್ಯ ಶಿಲ್ಪಿಯಾಗಿ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟವರು. ದಲಿತರು, ಶೋಷಿತರು ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಅವರು ನಡೆಸಿದ ಹೋರಾಟ ಜಗತ್ತಿಗೇ ಮಾದರಿಯಾಗಿದೆ. 1956ರ ಡಿಸೆಂಬರ್ 6ರಂದು ಅವರು ನಿಧನರಾದರಾದರೂ, ಅವರು ನೀಡಿದ ಸಂವಿಧಾನ ಮತ್ತು ತತ್ವಗಳು ಭಾರತದ ಅತಿದೊಡ್ಡ ಶಕ್ತಿಯಾಗಿ ಉಳಿದಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!