ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲಾಡ್ಜ್ ಸಿಬ್ಬಂದಿಯೊಬ್ಬರ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ಅಕ್ಟೋಬರ್ 17ರ ರಾತ್ರಿ ನಡೆದಿದೆ.
ಆರೋಪಿಗಳಾದ ಫಾರೂಕ್, ಸೋನು ಮತ್ತು ಇರ್ಫಾನ್ ಅವರು ಪುತ್ತೂರಿನ ಬಸ್ ನಿಲ್ದಾಣದ ಬಳಿಯ ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಕಡಬ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ ಎಂಬುವವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪುತ್ತೂರಿನ ಬಸ್ ನಿಲ್ದಾಣದ ಬಳಿಯ ಲಾಡ್ಜ್‌ನಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳು ಸಿಬ್ಬಂದಿ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನು ಓದಿ : Tiger Shroff firing case : ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ; ರಾಜಸ್ಥಾನದಲ್ಲಿ ಮೂವರು ಶೂಟರ್‌ಗಳು ಅರೆಸ್ಟ್!