HomeLOCALPuttur : ಚಹಾ ಕುಡಿಯುತ್ತಿದ್ದ ವಿದ್ಯಾರ್ಥಿ ಮೇಲೆ ಗ್ಯಾಂಗ್ ಅಟ್ಯಾಕ್!

Puttur : ಚಹಾ ಕುಡಿಯುತ್ತಿದ್ದ ವಿದ್ಯಾರ್ಥಿ ಮೇಲೆ ಗ್ಯಾಂಗ್ ಅಟ್ಯಾಕ್!

ಪುತ್ತೂರು : ಪುತ್ತೂರು ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದ ಕಾಲೇಜು ವಿದ್ಯಾರ್ಥಿಯ ಮೇಲೆ ದುಷ್ಕರ್ಮಿಗಳ ತಂಡವೊಂದು ಏಕಾಏಕಿ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಬೆಳ್ತಂಗಡಿ ನಿವಾಸಿಯಾಗಿರುವ ಆದಿಲ್ ಹುಸೈನ್ (21) ಹಲ್ಲೆಗೊಳಗಾದ ವಿದ್ಯಾರ್ಥಿ. ದಿನಾಂಕ 22-04-2026ರಂದು ಸಂಜೆ ಆದಿಲ್ ತನ್ನ ಸ್ನೇಹಿತರೊಂದಿಗೆ ಚಹಾ ಕುಡಿಯುತ್ತಿದ್ದಾಗ ಅಲ್ಲಿಗೆ ಬಂದ ಬಿ.ಕೆ. ಮೊಯಿನುದ್ದೀನ್, ಮೋಹದ್ ಹಾಗೂ ಇತರ ಐವರು ಈ ಕೃತ್ಯ ಎಸಗಿದ್ದಾರೆ.


ಹಳೆಯ ವೈಷಮ್ಯವೇ ಈ ಕೃತ್ಯಕ್ಕೆ ಕಾರಣ?

ಕೆಲವು ತಿಂಗಳ ಹಿಂದೆ ಕಾಲೇಜು ವಿದ್ಯಾರ್ಥಿಗಳಿಗೆ ಆರೋಪಿ ಮೊಯಿನುದ್ದೀನ್ ತಂಡ ಹೊಡೆಯುತ್ತಿದ್ದಾಗ, ಆದಿಲ್ ಮಧ್ಯಪ್ರವೇಶಿಸಿ ಜಗಳ ಬಿಡಿಸಿದ್ದರು. ಇದೇ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡು ಈಗ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆದಿಲ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಹಲ್ಲೆ ತಡೆಯಲು ಬಂದ ಆದಿಲ್ ಸ್ನೇಹಿತರಿಗೂ ಆರೋಪಿಗಳು ಬೆದರಿಕೆ ಹಾಕಿದ್ದು, ಸಾರ್ವಜನಿಕರು ಸೇರುತ್ತಿದ್ದಂತೆ ಜೀವಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಗಾಯಗೊಂಡ ಆದಿಲ್ ಸದ್ಯ ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 49/2026 ರಂತೆ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023ರ ವಿವಿಧ ಕಲಂಗಳಡಿ (189(2), 191(2), 191(3), 352, 115(2), 118(1), 351(2), 190) ಕೇಸ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments