Home ತಾಜಾ ಸುದ್ದಿ Raghav Chadha : ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಎಎಪಿ ತೊರೆದು ಬಿಜೆಪಿ ಸೇರಲಿದ್ದಾರೆ

    Raghav Chadha : ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಎಎಪಿ ತೊರೆದು ಬಿಜೆಪಿ ಸೇರಲಿದ್ದಾರೆ

    0
    38

    ಹೊಸದಿಲ್ಲಿ : ಆಮ್ ಆದ್ಮಿ ಪಕ್ಷದ (AAP) ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ಎಎಪಿ ತೊರೆದು ಭಾರತೀಯ ಜನತಾ ಪಾರ್ಟಿ (BJP) ಸೇರುವುದಾಗಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದಾರೆ.

    ರಾಜ್ಯಸಭೆಯಲ್ಲಿ ಉಪನಾಯಕನ ಸ್ಥಾನದಿಂದ ತಮ್ಮನ್ನು ಪದಚ್ಯುತಗೊಳಿಸಿದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದ್ದು, ತಮ್ಮೊಂದಿಗೆ ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಸೇರಿದಂತೆ ಮೂರನೇ ಎರಡರಷ್ಟು ರಾಜ್ಯಸಭಾ ಸಂಸದರು ಸಾಂವಿಧಾನಿಕ ನಿಬಂಧನೆಗಳ ಅಡಿಯಲ್ಲಿ ಬಿಜೆಪಿ ಸೇರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    15 ವರ್ಷಗಳ ಕಾಲ ತಮ್ಮ ಬೆವರು ಮತ್ತು ರಕ್ತ ಸುರಿಸಿ ಕಟ್ಟಿ ಬೆಳೆಸಿದ ಪಕ್ಷವು ತನ್ನ ಮೂಲ ತತ್ವಗಳಿಂದ ದೂರ ಸರಿದಿದೆ ಎಂದು ಚಡ್ಡಾ ಬೇಸರ ವ್ಯಕ್ತಪಡಿಸಿದರು. ಇವರೊಂದಿಗೆ ಪಾಠಕ್ ಮತ್ತು ಮಿತ್ತಲ್ ಕೂಡ ತಾವು ಎಎಪಿ ತೊರೆದು ಶೀಘ್ರದಲ್ಲೇ ಬಿಜೆಪಿ ಸೇರುವುದಾಗಿ ಸ್ಪಷ್ಟಪಡಿಸಿದ್ದಾರೆ.

    LEAVE A REPLY

    Please enter your comment!
    Please enter your name here

    error: Content is protected !!