Home ತಾಜಾ ಸುದ್ದಿ Samrat Choudhary : ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ...

    Samrat Choudhary : ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ

    0
    59

    ಪಟ್ನಾ : ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರನ್ನು ಮಂಗಳವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

     

    ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರಿಗೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. 243 ಸದಸ್ಯರ ಬಿಹಾರ ವಿಧಾನಸಭೆಯಲ್ಲಿ 89 ಶಾಸಕರನ್ನು ಹೊಂದಿರುವ ಅತಿದೊಡ್ಡ ಪಕ್ಷವಾದ ಬಿಜೆಪಿ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಮಂಗಳವಾರ ಸಭೆ ನಡೆಸಿತ್ತು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ವೀಕ್ಷಕ ಶಿವರಾಜ್ ಸಿಂಗ್ ಚೌಹಾಣ್, “ಸಾಮ್ರಾಟ್ ಚೌಧರಿ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ” ಎಂದು ಘೋಷಿಸಿದರು.

    ತಾರಾಪುರ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಸಾಮ್ರಾಟ್ ಚೌಧರಿ ಅವರು ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಇತ್ತೀಚೆಗಷ್ಟೇ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಬಿಹಾರದ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿ ನಾಯಕರೊಬ್ಬರು ಮುಖ್ಯಮಂತ್ರಿ ಗದ್ದುಗೆ ಏರುತ್ತಿದ್ದಾರೆ. 

    LEAVE A REPLY

    Please enter your comment!
    Please enter your name here

    error: Content is protected !!